ನಾಳೆ (ಜನವರಿ 31) ಪೋಲಿಯೋ ಲಸಿಕೆ ಕಾರ್ಯಕ್ರಮ : ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಸಚಿವ ಸುಧಾಕರ್ ಮನವಿ - Karavali Times ನಾಳೆ (ಜನವರಿ 31) ಪೋಲಿಯೋ ಲಸಿಕೆ ಕಾರ್ಯಕ್ರಮ : ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಸಚಿವ ಸುಧಾಕರ್ ಮನವಿ - Karavali Times

728x90

29 January 2021

ನಾಳೆ (ಜನವರಿ 31) ಪೋಲಿಯೋ ಲಸಿಕೆ ಕಾರ್ಯಕ್ರಮ : ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಸಚಿವ ಸುಧಾಕರ್ ಮನವಿ

ಬೆಂಗಳೂರು, ಜ. 30, 2021 (ಕರಾವಳಿ ಟೈಮ್ಸ್) : ಜನವರಿ 31 ರಂದು ಪೆÇೀಲಿಯೊ ಲಸಿಕೆ ಹಾಕಿಸುವ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಪೆÇೀಷಕರು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 17 ರಂದು ಪೆÇೀಲಿಯೋ ಲಸಿಕೆ ನೀಡಬೇಕಿತ್ತು. ಕೊರೊನಾ ಲಸಿಕೆ ಬಂದಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಜನವರಿ 31 ರಂದು ಭಾನುವಾರ 5 ವರ್ಷದೊಳಗಿನ 64,07,930 ಮಕ್ಕಳಿಗೆ ಪೆÇೀಲಿಯೊ ಲಸಿಕೆ ನೀಡಲಾಗುವುದು. ಲಸಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಚಾಲನೆ ದೊರೆಯಲಿದೆ ಎಂದರು. ಪೆÇೀಷಕರು ಹಿಂದೆ ಲಸಿಕೆ ಹಾಕಿಸಿದ್ದರೂ ಮತ್ತೆ ಹಾಕಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ. ಕಳೆದ 10-11 ವರ್ಷಗಳಿಂದ ಪೆÇಲೀಯೋ ಸೋಂಕು ಕಂಡುಬಂದಿಲ್ಲ. ಭಾರತದಲ್ಲಿ ಈ ರೋಗ ನಿಮೂರ್ಲನೆಯಾಗಿದೆ. ಆದರೆ ಪಕ್ಕದ ಪಾಕಿಸ್ತಾನ ಅಫಘಾನಿಸ್ತಾನದಲ್ಲಿ ಈ ರೋಗ ಇರುವುದರಿಂದ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕಿದೆ ಎಂದರು. ನಮ್ಮಲ್ಲಿ ಒಟ್ಟು 85,05,060 ಡೋಸ್ ಪೆÇಲೀಯೊ ಲಸಿಕೆ ಲಭ್ಯವಿದೆ. 1,10,179 ವ್ಯಾಕ್ಸಿನೇಟರ್‍ಗಳು ಇದ್ದಾರೆ. 6,645 ಸೂಪರ್ ವೈಸರ್ ತಂಡ, 904 ಮೊಬೈಲ್ ತಂಡ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 32,908 ಬೂತ್‍ಗಳನ್ನು ಸಿದ್ಧಪಡಿಸಲಾಗಿದೆ ಎಂದವರು ÀiÁಹಿತಿ ನೀಡಿದರು. ರಾಜ್ಯದಲ್ಲಿ 2,90,533 ಮಂದಿಗೆ ಕೋವಿಡ್ ಲಸಿಕೆ ನೀಡಿದ್ದು, ಇವತ್ತಿನವರೆಗೆ ಶೇ. 49 ಸಾಧನೆಯಾಗಿದೆ. ಲಸಿಕೆ ಪಡೆದಿರುವುದರಿಂದ ಯಾವುದೇ ಸಾವು ಆಗಿಲ್ಲ. ಈ ಬಗ್ಗೆ ತಪ್ಪು ತಿಳಿವಳಿಕೆ ಬೇಡ. ಕೆಲವೆಡೆ ಅಡ್ಡ ಪರಿಣಾಮವಾಗಿದ್ದು, ಅದು ಕೂಡ ನಂತರ ಪರಿಹಾರವಾಗಿದೆ. ವಾಂತಿ, ನಶೆ ಬರುವುದು ಸೇರಿದಂತೆ ಕೆಲ ಲಕ್ಷಣಗಳು ಕಾಣಿಸಿಕೊಳ್ಳಲಿದೆಯಷ್ಟೆ ಅದೂ ಶೀಘ್ರದಲ್ಲಿ ವಾಸಿಯಾಗಲಿದೆ ಎಂದು ಸಚಿವರು ಹೇಳಿದರು.
  • Blogger Comments
  • Facebook Comments

0 comments:

Post a Comment

Item Reviewed: ನಾಳೆ (ಜನವರಿ 31) ಪೋಲಿಯೋ ಲಸಿಕೆ ಕಾರ್ಯಕ್ರಮ : ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಸಚಿವ ಸುಧಾಕರ್ ಮನವಿ Rating: 5 Reviewed By: karavali Times
Scroll to Top