ಬಂಟ್ವಾಳ, ಫೆ. 05, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ವಿಟ್ಲ, ಉಪ್ಪಿನಂಗಡಿ, ಪುತ್ತೂರು ಭಾಗದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಗಳನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ ಡಿ ನಾಗರಾಜ್ ನೇತೃತ್ವದ ವಿಶೇಷ ಪೊಲೀಸ್ ತಂಡ ಬೇಧಿಸಿ, ಖತರ್‍ನಾಕ್ ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಸಫಲರಾಗಿದ್ದಾರೆ.
ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿ ಸೋಜ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಠಾಣಾ ಎಸ್ಸೈ ಅವಿನಾಶ್, ಕ್ರೈಂ ಎಸ್ಸೈ ಕಲೈಮಾರ್, ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ, ಕ್ರೈ ಎಸ್ಸೈ ಸಂಜೀವ, ವಿಟ್ಲ ಠಾಣಾ ಎಸ್ಸೈ ವಿನೋದ್ ರೆಡ್ಡಿ, ಉಪ್ಪಿನಂಗಡಿ ಠಾಣಾ ಎಸ್ಸೈ ಈರಯ್ಯ, ಡಿಸಿಐಬಿ ಮತ್ತು ಠಾಣಾ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ ಈ ಕಾರ್ಯಾಚರಣೆ ನಡೆಸಿ ಹಲವು ಕಳ್ಳತನ ಪ್ರಕರಣಗಳನ್ನು ಬೇಧಿಸಿದ್ದಾರೆ.
ಆರೋಪಿಗಳಾದ ಮಂಗಳೂರು ತಾಲೂಕಿನ ಅರ್ಕುಳ ಸಮೀಪದ ವಳಚ್ಚಿಳ್ ನಿವಾಸಿ ಅಮ್ಮಿ ಯಾನೆ ಅಮರುದ್ದಿನ್, ಕಣ್ಣೂರು ನಿವಾಸಿಗಳಾದ ಮಹಮದ್ ಯೂನುಸ್, ಹಫೀಸ್ ಯಾನೆ ಅಪ್ಪಿ, ಬೆಂಗ್ರೆ ನಿವಾಸಿ ಮಹಮ್ಮದ್ ಸಫ್ವಾನ್ ಯಾನೆ ಸರತ್ ಯಾನೆ ಕರೂ ಯಾನೆ ಸರೂ ಯಾನೆ ಸಫ್ವಾನ್, ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಪೆರುವ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಯಾನೆ ಕಳ್ಳ ಫಾರೂಕ್ ಎಂಬವರುಗಳನ್ನು ಪೊಲೀಸ್ ವಿಶೇಷ ತಂಡ ಬಂಧಿಸಿದೆ.
ಬಂಧಿತ ಆರೋಪಿಗಳು ಬಂಟ್ವಾಳ ನಗರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 6/2021, 30/2020, 36/2020, 47/2020, 5/2021 ರ ಸುರಭಿ ಬಾರ್ ಕಳ್ಳತನ, ನರಿಕೊಂಬು ದೇವಸ್ಥಾನ ಹುಂಡಿ ಕಳವು, ಮೆಲ್ಕಾರ್ ಕಾಲೇಜು ಕಳ್ಳತನ, ಅಮ್ಟೂರು ಚರ್ಚ್ ಕಳ್ಳತನ, ಬಿ ಸಿ ರೋಡು ಚಂಡಿಕಾ ಪರಮೇಶ್ವರಿ ದೇವಸ್ಥಾನ ಹುಂಡಿ ಕಳ್ಳತನ, ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂಕ 1/2020, 26/2020, 16/2021, 17/2021ರ ಸ್ಕೂಲ್ ಕಳ್ಳತನ, ಶಂಭೂರು ಶಾಲಾ ಕಳ್ಳತನ, ಫರ್ಲಾ ಚರ್ಚ್ ಕಳ್ಳತನ, ರಾಜೇಶ್ ಬಾರ್ ಕಳ್ಳತನ, ವಿಟ್ಲ ಪೆÇಲೀಸ್ ಠಾಣೆ ಅಪರಾಧ ಕ್ರಮಾಂಕ 112/2021 ರ ಇಆರ್‍ಎಸ್‍ಎಸ್ ಪೆಟ್ರೋಲ್ ಬಂಕ್ ಕಳ್ಳತನ, ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 5/2021 ರ ಪಲ್ಸರ್ ಬೈಕ್ ಕಳ್ಳತನ, ಉಪ್ಪಿನಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 119/2020 ರ ಉಲ್ಲಾಸ್ ಬಾರ್ ಕಳ್ಳತನ ಹಾಗೂ ಕೇರಳ ರಾಜ್ಯದ ಮಂಜೇಶ್ವರ ಪೆÇಲೀಸ್ ಠಾಣಾ ವ್ಯಾಪ್ತಿಯ ಪಲ್ಸರ್ ಬೈಕ್ ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು 13 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿರುತ್ತದೆ ಎಂದು ತಿಳಿಸಿರುವ ಪೊಲೀಸರು ಬಂಧಿತ ಆರೋಪಿಗಳಿಂದ 3 ಬೈಕ್, 1 ಮೊಬೈಲ್, 6 ಡಿವಿಆರ್ ಸೆಟ್ ಬಾಕ್ಸ್, 14 ಜೀವಂತ ಗುಂಡು, 2 ಮಾನಿಟರ್, ಬ್ರಾಡ್ ಬ್ಯಾಂಡ್ ಒ ಎಲ್ ಟಿ ಬಾಕ್ಸ್, 40 ಸಾವಿರ ರೂಪಾಯಿ ನಗದು ಹಣ ಸಹಿತ ಒಟ್ಟು 4 ಲಕ್ಷದ 80 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
5 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment