ಬಂಟ್ವಾಳ, ಫೆ. 23, 2021 (ಕರಾವಳಿ ಟೈಮ್ಸ್) : ಇಲ್ಲಿನ ತಾ.ಪಂ. ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕ ಹಾಗೂ ಬೀಡಿ ಉದ್ಯಮಿಯಾಗಿದ್ದ ಚಂದ್ರಹಾಸ ಶೆಟ್ಟಿ ಬೋಳಂತೂರು ಅವರು ದೀರ್ಘ ಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಇವರು ವೀರಕಂಭ ಗ್ರಾ.ಪಂ. ಅಧ್ಯಕ್ಷರಾಗಿ, ತಾ ಪಂ ಸದಸ್ಯರಾಗಿ, ಅಧ್ಯಕ್ಷರಾಗಿ ರಾಜಕೀಯವಾಗಿ ಸಕ್ರಿಯರಾಗಿದ್ದರಲ್ಲದೆ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ತಮ್ಮನ್ನು ತಾವು ವಿಶಿಷ್ಟವಾಗಿ ಗುರುತಿಸಿಕೊಂಡಿದ್ದರು. ಪ್ರೀತಿ ಬೀಡಿ ಹಾಗೂ ಫಾಮ್ರ್ಸ್ ನಡೆಸಿಕೊಂಡು ಬರುವ ಮೂಲಕ ಉದ್ಯಮ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ, ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮೊದಲಾದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
23 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment