ಮಂಗಳೂರು, ಫೆ. 09, 2021 (ಕರಾವಳಿ ಟೈಮ್ಸ್) : ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಕುರಿತು ಕಳೆದೆರಡು ದಿನಗಳಿಂದ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರು ಒಟ್ಟು 2207 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಪೈಕಿ 937 ಹೆಲ್ಮೆಟ್ ರಹಿತ ಸಂಚಾರ, 198 ದೋಷಯುಕ್ತ ನಂಬರ್ ಪ್ಲೇಟ್ ಹಾಗೂ 189 ಸೀಟ್ ಬೆಲ್ಟ್ ರಹಿತ ವಾಹನ ಚಲಾವಣೆ ಸೇರಿದೆ. ಸಂಚಾರ ನಿಯಮ ಉಲ್ಲಂಘನೆಗಾಗಿ ಒಟ್ಟು 10.29 ಲಕ್ಷ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ವಿವರ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಕಾರ್ಯಾಚರಣೆ ಮುಂದುವರಿಯಲಿದೆ ಎಂದಿದ್ದಾರೆ.
8 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment