ಜಿಲ್ಲಾಡಳಿತ-ಪೊಲೀಸ್ ಇಲಾಖೆ ರ್ಯಾಗಿಂಗ್ ಮುಕ್ತ ಅಭಿಯಾನ ನಡೆಸಿ ವಿದ್ಯಾರ್ಥಿ ಜಾಗೃತಿ ಮೂಡಿಸಲು ಎಸ್.ಎಫ್.ಐ ಆಗ್ರಹ - Karavali Times ಜಿಲ್ಲಾಡಳಿತ-ಪೊಲೀಸ್ ಇಲಾಖೆ ರ್ಯಾಗಿಂಗ್ ಮುಕ್ತ ಅಭಿಯಾನ ನಡೆಸಿ ವಿದ್ಯಾರ್ಥಿ ಜಾಗೃತಿ ಮೂಡಿಸಲು ಎಸ್.ಎಫ್.ಐ ಆಗ್ರಹ - Karavali Times

728x90

16 February 2021

ಜಿಲ್ಲಾಡಳಿತ-ಪೊಲೀಸ್ ಇಲಾಖೆ ರ್ಯಾಗಿಂಗ್ ಮುಕ್ತ ಅಭಿಯಾನ ನಡೆಸಿ ವಿದ್ಯಾರ್ಥಿ ಜಾಗೃತಿ ಮೂಡಿಸಲು ಎಸ್.ಎಫ್.ಐ ಆಗ್ರಹ

ಮಂಗಳೂರು, ಫೆ. 16, 2021 (ಕರಾವಳಿ ಟೈಮ್ಸ್) : ಜಿಲ್ಲಾಡಳಿತ ಹಾಗೂ ಜಿಲ್ಲೆಯ ಪೆÇಲೀಸ್ ಇಲಾಖೆಯು ರ್ಯಾಗಿಂಗ್ ಮುಕ್ತ ಅಭಿಯಾನವನ್ನು ನಡೆಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಪರ ಜಿಲ್ಲಾಧಿಕಾರಿ ಹಾಗೂ ಮಂಗಳೂರು ನಗರ ಪೆÇಲೀಸ್ ಆಯುಕ್ತರಿಗೆ ಲಿಖಿತ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿಗಳಲ್ಲಿ ರ್ಯಾಗಿಂಗ್ ಪ್ರಕರಣ ದಾಖಲಾಗಿದ್ದು, ರ್ಯಾಗಿಂಗ್ ನಡೆಸಿದ ವಿದ್ಯಾರ್ಥಿಗಳ ಬಂಧನವಾಗಿದೆ. ಈ ರ್ಯಾಗಿಂಗ್ ಪ್ರಕರಣದ ಬಗ್ಗೆ ಜಿಲ್ಲಾಡಳಿತ ರ್ಯಾಗಿಂಗ್ ನಡೆಸುವ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆಯಾದರೂ, ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ. ಹೊರ ರಾಜ್ಯ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ನಗರದ ಶಾಲಾ-ಕಾಲೇಜುಗಳಿಗೆ ಆಗಮಿಸುತ್ತಾರೆ. ಈ ವಿದ್ಯಾರ್ಥಿಗಳು ತಮ್ಮ ಹೆತ್ತವರಿಂದ ದೂರವಿದ್ದು ನಗರದಲ್ಲೇ ಹಾಸ್ಟೆಲುಗಳಲ್ಲಿ ನೆಲೆಸಿ ವಿದ್ಯಾರ್ಜನೆ ಮಾಡುತ್ತಾರೆ. ರ್ಯಾಗಿಂಗ್ ಪ್ರಕರಣವು ಇಂತಹ ವಿದ್ಯಾರ್ಥಿಗಳಲ್ಲಿ ಹಾಗೂ ಪೆÇೀಷಕರಲ್ಲಿ ಭಯದ ವಾತಾವರಣ ನಿರ್ಮಿಸಿದೆ. ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ರ್ಯಾಗಿಂಗ್ ಮುಕ್ತ ಸಮಿತಿಯಿದೆಯಾದರೂ ಕೇವಲ ಹೆಸರಿಗೆ ಮಾತ್ರ ಇರುವಂತಾಗಿದೆ. ಇನ್ನೂ ಕೆಲವು ಶಾಲಾ-ಕಾಲೇಜುಗಳಲ್ಲಿ ರ್ಯಾಗಿಂಗ್ ಮುಕ್ತ ಸಮಿತಿಯೇ ರಚನೆಯಾಗಿಲ್ಲ. ವಿದ್ಯಾ ಸಂಸ್ಥೆಗಳಲ್ಲಿ ರ್ಯಾಗಿಂಗ್ ಮೊದಲಾದ ವಿದ್ಯಾರ್ಥಿ ವಿರೋಧಿ ಚಟುವಟಿಕೆಗಳು ನಡೆಯದಂತೆ ಸಮಿತಿಯನ್ನು ರಚಿಸಿ ಕಾರ್ಯನಿರ್ವಹಿಸಬೇಕಾಗಿದೆ. ಯಾವುದೇ ವಿದ್ಯಾರ್ಥಿಗಳು ಕಿರುಕುಳವನ್ನು ಎದುರಿಸುತ್ತಿದ್ದರೆ ಆತಂಕಕ್ಕೆ ಒಳಪಡದೆ, ತಮ್ಮ ವಿದ್ಯಾಸಂಸ್ಥೆಯ ಸಂಬಂಧ ಪಟ್ಟ ಸಮಿತಿಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ದೈರ್ಯ ತುಂಬುವಂತಹÀ ಕಾರ್ಯವನ್ನು ಸಮಿತಿಯು ನಿರ್ವಹಿಸಬೇಕು. ವಿದ್ಯಾರ್ಥಿಗಳ ನಡುವೆ ಭಯ ಮುಕ್ತ ವಾತಾವರಣ ಸೃಷ್ಟಿಸುವಲ್ಲಿ ವಿದ್ಯಾಸಂಸ್ಥೆಯು ಬದ್ಧರಾಗಿರಬೇಕು. ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿ ಹಾಗೂ ಹಾಸ್ಟೆಲುಗಳಲ್ಲಿ ರ್ಯಾಗಿಂಗ್ ತಡೆ ಸಮಿತಿ ರಚಿಸಿ ರ್ಯಾಗಿಂಗ್ ಹಾಗೂ ವಿದ್ಯಾರ್ಥಿ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಕಾರ್ಯಪ್ರವೃತ್ತರಾಗಬೇಕು. ಶಾಲಾ-ಕಾಲೇಜುಗಳಲ್ಲಿ ಈ ಸಮಿತಿ ರಚಿಸಲಾಗಿದೆಯೇ ಹಾಗೂ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆಯೇ ಎಂದು ಸಂಬಂಧಪಟ್ಟ ಇಲಾಖೆಗಳು ಪರಿಶೀಲನೆ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭ ಎಸ್‍ಎಫ್‍ಐ ಜಿಲ್ಲಾಧ್ಯಕ್ಷೆ ಮಾಧುರಿ ಬೋಳಾರ್, ಜಿಲ್ಲಾ ಪದಾಧಿಕಾರಿಗಳಾದ ಸಿನಾನ್ ಬೆಂಗ್ರೆ, ಶಮಾಝ್ ಕೆ.ಸಿ.ರೋಡ್, ಜಿಲ್ಲಾ ನಾಯಕರಾದ ತಿಲಕ್ ಕುತ್ತಾರ್, ವಿನೀತ್ ದೇವಾಡಿಗ, ಸಲೋನಿ ಬೋಳಾರ್, ಸಫ್ವಾನ್ ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಜಿಲ್ಲಾಡಳಿತ-ಪೊಲೀಸ್ ಇಲಾಖೆ ರ್ಯಾಗಿಂಗ್ ಮುಕ್ತ ಅಭಿಯಾನ ನಡೆಸಿ ವಿದ್ಯಾರ್ಥಿ ಜಾಗೃತಿ ಮೂಡಿಸಲು ಎಸ್.ಎಫ್.ಐ ಆಗ್ರಹ Rating: 5 Reviewed By: karavali Times
Scroll to Top