ತಾ.ಪಂ. ರದ್ದತಿ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ : ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟನೆ - Karavali Times ತಾ.ಪಂ. ರದ್ದತಿ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ : ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟನೆ - Karavali Times

728x90

6 February 2021

ತಾ.ಪಂ. ರದ್ದತಿ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ : ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟನೆ

ಕಾರವಾರ, ಫೆ. 07, 2021 (ಕರಾವಳಿ ಟೈಮ್ಸ್) : ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರಾಜ್ಯ ಸರಕಾರ ರದ್ದುಪಡಿಸಲಿದೆ ಎಂಬ ಊಹಾಪೋಹದ ಸುದ್ದಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದುದು. ತಾ.ಪಂ. ವ್ಯವಸ್ಥೆ ರದ್ದುಪಡಿಸುವ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ. ಈ ಬಗ್ಗೆ ಗ್ರಾಮೀಣಾಭಿವೃದ್ದಿ ಸಚಿವರೂ ಕೂಡಾ ಸ್ಪಷ್ಟಪಡಿಸಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಈ ಬಾರಿಯೂ ತಾ ಪಂ ಹಾಗೂ ಜಿ ಪಂ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿದೆ ಎಂದರು. ಮೂರೂ ವಿಭಾಗದ ಪಂಚಾಯತ್ ರಾಜ್ ವ್ಯವಸ್ಥೆಗಳಡಿಯೂ ಚುನಾವಣೆ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ತಾ.ಪಂ. ರದ್ದತಿ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ : ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟನೆ Rating: 5 Reviewed By: karavali Times
Scroll to Top