ಕೋವಿಡ್ ಹೆಚ್ಚಳ ಹಿನ್ನಲೆ : ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ನಾಯಕ್ - Karavali Times ಕೋವಿಡ್ ಹೆಚ್ಚಳ ಹಿನ್ನಲೆ : ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ನಾಯಕ್ - Karavali Times

728x90

21 April 2021

ಕೋವಿಡ್ ಹೆಚ್ಚಳ ಹಿನ್ನಲೆ : ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ನಾಯಕ್

ಬಂಟ್ವಾಳ, ಎಪ್ರಿಲ್ 22, 2021 (ಕರಾವಳಿ ಟೈಮ್ಸ್) : ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಆಸ್ಪತ್ರೆ ವೈದ್ಯಾಧಿಕಾರಿ ಡಾ ಪುಷ್ಪಲತಾ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. 


    ಈ ವೇಳೆ ಡಾ  ಕಿಶೋರ್ ಕುಮಾರ್, ಡಾ ವೇಣುಗೋಪಾಲ, ಡಾ ಸೌಮ್ಯ ಅವರು ಆಸ್ಪತ್ರೆ ಕೈಗೊಂಡ ಕ್ರಮಗಳ ಬಗ್ಗೆ ಶಾಸಕರಿಗೆ ವಿವರಿಸಿದರು. ಈ ಸಂದರ್ಭ ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಬಂಟ್ವಾಳ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಅಮ್ಮುಂಜೆ ಗ್ರಾ ಪಂ ಸದಸ್ಯ ಕಾರ್ತಿಕ್ ಬಳ್ಳಾಲ್, ಪವನ್ ಶೆಟ್ಟಿ ಮೊದಲಾದವರು ಶಾಸಕರ ಜೊತೆಗಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕೋವಿಡ್ ಹೆಚ್ಚಳ ಹಿನ್ನಲೆ : ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ನಾಯಕ್ Rating: 5 Reviewed By: karavali Times
Scroll to Top