ಬೆಂಗಳೂರು, ಎಪ್ರಿಲ್ 03, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಕೋವಿಡ್ ವೈರಸ್ಸಿನ 2ನೇ ಅಲೆ ವ್ಯಾಕವಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಎಚ್ಚರಿಸುತ್ತಿರುವ ಮಧ್ಯೆ ಸರಕಾರ ತನಗೆ ತೋಚಿದಂತೆ ಮಾರ್ಗಸೂಚಿ ಆಟ ಆಡುತ್ತಿದ್ದು, ಇದು ಜನರ ಪ್ರಾಣದ ಮೇಲೆ ಆಡುವ ಚೆಲ್ಲಾಟವಾಗಿದೆ. ಇದು ಇದೇ ರೀತಿ ಮುಂದುವರಿದರೆ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ಸರಕಾರದ ಕ್ರಮದ ವಿರುದ್ದ ರಾಜ್ಯಾದ್ಯಂತ ಹೋರಾಟ ಅನಿವಾರ್ಯವಾದೀತು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೇಶಿ ಸರಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು ಹಾಗೂ ಕಠಿಣ ನಿರ್ಧಾರ ತಳೆಯಬೇಕು. ಅದು ಬಿಟ್ಟು ತಮಗೆ ಬೇಕಾದಾಗ ಮಾರ್ಗಸೂಚಿ ಬಿಡುಗಡೆ ಮಾಡಿ ಬೇಡವಾದಾಗ ಸಡಿಲ ಮಾಡುವುದು ಸರಿಯಲ್ಲ. ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿ. ಅದು ಎಲ್ಲರಿಗೂ ಅನ್ವಯವಾಗುವಂತೆ ಮಾಡಲಿ, ಬೇಕಾದಾಗ ಬೇಕಾದವರಿಗೆ ಅನುಕೂಲವಾಗುವ ರೀತಿಯಲ್ಲಿ ಸಡಿಲ ಮಾಡುವಂತಿರವಾರದು. ಇದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನ. ಜನರ ಸುರಕ್ಷತೆ ಹಾಗೂ ಒಳ್ಳೆಯದಕ್ಕಾಗಿ ಕಾನೂನು ಮಾಡಲಿ. ನಾವು ಬೇಡ ಎನ್ನುವುದಿಲ್ಲ. ಆದರೆ, ಆ ಕಾನೂನನ್ನು ಎಲ್ಲರೂ ಪಾಲಿಸಬೇಕು. ಅವರಿಗೆ ಬೇಕಾದಾಗ ಕಾನೂನು ಸಡಿಲ ಮಾಡುವುದು ಬೇಡವಾದಾಗ ಕಠಿಣ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಡಿಕೆಶಿ ಇದು ಜನರ ಜೀವದ ಮೇಲೆ ಚೆಲ್ಲಾಟವಾಡಿದಂತೆ. ಸರಕಾರ ಇಂತಹ ಕ್ರಮ ಕೈಗೊಂಡರೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟ ಮಾಡುವುದು ಅನಿವಾರ್ಯವಾದೀತು ಎಂದು ಎಚ್ಚರಿಸಿದ್ದಾರೆ.
0 comments:
Post a Comment