ಬಂಟ್ವಾಳ, ಜೂನ್ 30, 2021 (ಕರಾವಳಿ ಟೈಮ್ಸ್) : ತಾಲೂಕಿನ ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಬೀಡು ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅರಣ್ಯೀಕರಣ ಕಾಮಗಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೇಸ್ ಡಿ ಸೋಜ ಪಿ ಹಾಗೂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೊಯಿದು ಕುಂಞಿ, ಸದಸ್ಯರಾದ ಕೆ ಪ್ರತಾಪ್ ಚಂದ್ರ, ಅಬ್ದುಲ್ ಹಮೀದ್, ರಮೇಶ್ ಎಸ್ ಪೂಜಾರಿ, ಪಂಚಾಯತ್ ಕಾರ್ಯದರ್ಶಿ ನಳಿನಿ ಎ ಕೆ ಮೊದಲಾದವರು ಭಾಗವಹಿಸಿದ್ದರು.
30 June 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment