ಬೆಂಗಳೂರು, ಜುಲೈ 19, 2021 (ಕರಾವಳಿ ಟೈಮ್ಸ್) : ಯುಜಿಸಿಇಟಿ-2021 ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ಜುಲೈ 20ರವರೆಗೆ ಅವಧಿ ವಿಸ್ತರಿಸಲಾಗಿದೆ. ಅದೇ ರೀತಿ ಈಗಾಗಲೇ ಆನ್ ಲೈನ್ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಪ್ಪು ಮಾಹಿತಿ ನಮೂದಿಸಿದ್ದರೆ ಅದನ್ನು ತಿದ್ದುಪಡಿ ಮಾಡಲು ಜುಲೈ 20ರಂದು ಸಂಜೆ 6.30 ರಿಂದ ಜುಲೈ 23 ರಂದು ಸಂಜೆ 6 ಗಂಟೆವರೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳಿಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟಿಗೆ ಭೇಟಿ ನೀಡುವಂತೆ ಕೆಇಎ ಪ್ರಕಟಣೆ ತಿಳಿಸಿದೆ.
19 July 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment