ಬಂಟ್ವಾಳ, ಜುಲೈ 02, 2021 (ಕರಾವಳಿ ಟೈಮ್ಸ್) : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟ ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಕುಮಾರ್ ಅವರೊಂದಿಗೆ ಶಾಸಕ ಯು ಟಿ ಖಾದರ್ ನೇತೃತ್ವದಲ್ಲಿ ಪಂಚಾಯತ್ ನಿಯೋಗ ಶುಕ್ರವಾರ ಮಾತುಕತೆ ನಡೆಸಿತು.
ನಿಯೋಗದಲ್ಲಿ ಇರಾ ಗ್ರಾ ಪಂ ಅಧ್ಯಕ್ಷೆ ಆಗ್ನೇಸ್ ಡಿ’ಸೋಜಾ, ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಉಪಾಧ್ಯಕ್ಷ ಮೊಯಿದು ಕುಂಞÂ, ಗ್ರಾಮ ಪಂಚಾಯತ್ ಸದಸ್ಯರು ಇದ್ದರು. ಜಿ ಪಂ ಉಪಕಾರ್ಯದರ್ಶಿ ಆನಂದ ಕೆ ಈ ಸಂದರ್ಭ ಉಪಸ್ಥಿತರಿದ್ದರು.
0 comments:
Post a Comment