ಸೋಮವಾರದಿಂದ ರಾಜ್ಯ ಅನ್ ಲಾಕ್ : ಬಹುತೇಕ ಸೇವೆಗಳು ಓಪನ್ , ನೂತನ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ - Karavali Times ಸೋಮವಾರದಿಂದ ರಾಜ್ಯ ಅನ್ ಲಾಕ್ : ಬಹುತೇಕ ಸೇವೆಗಳು ಓಪನ್ , ನೂತನ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ - Karavali Times

728x90

3 July 2021

ಸೋಮವಾರದಿಂದ ರಾಜ್ಯ ಅನ್ ಲಾಕ್ : ಬಹುತೇಕ ಸೇವೆಗಳು ಓಪನ್ , ನೂತನ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ

 ಬೆಂಗಳೂರು, ಜುಲೈ 03, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿಯನ್ನು ಹೊಸದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ಘೋಷಿಸಿದ್ದಾರೆ. ಹೊಸ ಮಾರ್ಗಸೂಚಿ ಪ್ರಕಾರ ಸೋಮವಾರದಿಂದ ವಾರಾಂತ್ಯ ಕಫ್ರ್ಯೂ ವಾಪಾಸು ಪಡೆಯಲಾಗಿದ್ದು, ರಾತ್ರಿ ಕಫ್ರ್ಯೂ ಅವಧಿಯನ್ನು ಬದಲಾಯಿಸಲಾಗಿದೆ. ಯಾವುದೇ ಸಭೆ-ಸಮಾರಂಭಗಳಿಗೆ ಅವಕಾಶ ನೀಡಲಾಗಿಲ್ಲ. ಹೊಸ ಮಾರ್ಗಸೂಚಿ ಜುಲೈ 19ರವರೆಗೆ ಜಾರಿಯಲ್ಲಿರಲಿದ್ದು, ಬಳಿಕ ಮುಂದಿನ ಆದೇಶ ಬರಲಿದೆ ಎಂದು ಸಿಎಂ ತಿಳಿಸಿದ್ದಾರೆ. 

ಕೋವಿಡ್-19 ನಿಯಂತ್ರಣ ತಾಂತ್ರಿಕ ಸಮಿತಿಯ ಸಲಹೆಗಳನ್ನು ಪಡೆದು, ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಸಿಎಂ ಸುದ್ದಿಗಾರರಿಗೆ ನೂತನ ಮಾರ್ಗಸೂಚಿ ಬಗ್ಗೆ ವಿವರಿಸಿದರು. 

ಸರ್ಕಾರಿ, ಖಾಸಗಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆಗಳು, ಮಾಲ್‍ಗಳು, ಧಾರ್ಮಿಕ ಕೇಂದ್ರಗಳು, ಮೆಟ್ರೋ, ಕಾರ್ಮಿಕ ಕಾರ್ಯಗಳಿಗೂ ಅವಕಾಶ ಕಲ್ಪಿಸಲಾಗಿದೆ. ಸರಕಾರಿ, ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಮಾಲ್‍ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಮೆಟ್ರೋ ಸಹಿತ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಕೂಡಾ ಅವಕಾಶ ಕಲ್ಪಿಸಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ, ಮದುವೆ ಹಾಗೂ ಇತರ ಕುಟುಂಬ ಶುಭ ಸಮಾರಂಭಗಳಿಗೆ 100 ಜನ ಮಾತ್ರ ಅವಕಾಶ. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರಿಗೆ ಮಾತ್ರ ಅವಕಾಶ, ಈಜು ಕೊಳ, ಕ್ರೀಡಾಂಗಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

ರಾತ್ರಿ ನಿರ್ಬಂಧವನ್ನು ಬದಲಾಯಿಸಲಾಗಿದ್ದು, ರಾತ್ರಿ 9 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ನೈಟ್ ಕಫ್ರ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ ಕರ್ಫ್ಯೂ ವಾಪಾಸು ಪಡೆದುಕೊಳ್ಳಲಾಗಿದೆ. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ, ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ಸಭೆ ನಡೆಸಿ ಬಳಿಕ ತೀರ್ಮಾನಿಸಲಾಗುವುದು, ಬಾರ್ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದ್ದು, ಪಬ್ ಹಾಗೂ ಚಿತ್ರ ಮಂದಿರ ಕಾರ್ಯನಿರ್ವಹಿಸಲು ಅವಕಾಶವಿಲ್ಲ, 

ಜಿಲ್ಲಾವಾರು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಪರಿಸ್ಥಿತಿಗೆ ಹೊಂದಿಕೊಂಡು ಆಯಾ ಜಿಲ್ಲಾಡಳಿತಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಜವಾಬ್ದಾರಿ ನೀಡಲಾಗಿದೆ. ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸೋಮವಾರದಿಂದ ರಾಜ್ಯ ಅನ್ ಲಾಕ್ : ಬಹುತೇಕ ಸೇವೆಗಳು ಓಪನ್ , ನೂತನ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ Rating: 5 Reviewed By: karavali Times
Scroll to Top