ಬಂಟ್ವಾಳ, ಜುಲೈ 23, 2021 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ತಾಲೂಕಿನ ಬಂಟ್ವಾಳ ವಲಯದ ಸರಪಾಡಿ ಎ ಮತ್ತು ಸರಪಾಡಿ ಬಿ ಒಕ್ಕೂಟದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಮತ್ತು ಲಾಭಾಂಶ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಮುಖ್ಯ ಶಿಕ್ಷಕ ಉದಯಕುಮಾರ್ ಜೈನ್ ಹಾಗೂ ಒಕ್ಕೂಟ ಅಧ್ಯಕ್ಷ ಪುರುಷೋತ್ತಮ ಅವರು ಕಾರ್ಯಕ್ರಮ ಉದ್ಘಾಟಿಸಿ, ಪರಿಸರದ ಬಗ್ಗೆ ಮಾಹಿತಿ ನೀಡಿ ಶಾಲಾವಣದಲ್ಲಿ ಗಿಡ ನಾಟಿ ಮಾಡಿದವರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸ್ವಪ್ನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಪರಿಸರ ಉಳಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಗಿರಿಧರ, ಮುಖ್ಯ ಶಿಕ್ಷಕಿ ವನಿತ ಹಾಗೂ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ಕೇಶವ ಕೆ ಸಂಘಕ್ಕೆ ಲಾಭಾಂಶ ವಿತರಣೆ ಮಾಡಿ ಲಾಭಾಂಶವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗಿಸಿ ಎಂದು ತಿಳಿಸಿದರು. ಇಂದಿರಾ ಸ್ವಾಗತಿಸಿದರು. ಸೇವಾ ಪ್ರತಿನಿಧಿಗಳಾದ ಶುಭ ವಂದಿಸಿ, ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.














0 comments:
Post a Comment