ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷರಾಗಿ ಅರ್ಶದ್ ಸರವು ನೇಮಕ - Karavali Times ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷರಾಗಿ ಅರ್ಶದ್ ಸರವು ನೇಮಕ - Karavali Times

728x90

10 July 2021

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷರಾಗಿ ಅರ್ಶದ್ ಸರವು ನೇಮಕ

ಬಂಟ್ವಾಳ, ಜುಲೈ 10, 2021 (ಕರಾವಳಿ ಟೈಮ್ಸ್) :  ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಅರ್ಶದ್ ಸರವು ಅವರನ್ನು ನೇಮಕಗೊಳಿಸಲಾಗಿದೆ. 

ಮಾಜಿ ಸಚಿವ ಬಿ ರಮಾನಾಥ ರೈ ಅವರ ನಿರ್ದೇಶನದಂತೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಅವರ ಶಿಫಾರಸ್ಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್ ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ. 

ಮಂಗಳೂರು-ಮಲ್ಲಿಕ್ಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪಕ್ಷದ ಪ್ರಮುಖ ನಾಯಕರ ಸಮ್ಮುಖದಲ್ಲಿ ಅರ್ಶದ್ ಅವರು ನೇಮಕಾತಿ ಆದೇಶ ಪತ್ರ ಸ್ವೀಕರಿಸಿದ್ದಾರೆ. 

ಕೊಳ್ನಾಡು ಗ್ರಾಮದ ಕೋಡಪದವು ಸಮೀಪದ ಸರವು ನಿವಾಸಿಯಾಗಿರುವ ಅರ್ಶದ್ ಅವರು ಪದವೀಧರರು. ಕೊಳ್ನಾಡು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. ಕೋವಿಡ್-19 ಲಾಕ್ ಡೌನ್ ಅವಧಿಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷರಾಗಿ ಅರ್ಶದ್ ಸರವು ನೇಮಕ Rating: 5 Reviewed By: karavali Times
Scroll to Top