ಬೆಂಗಳೂರು, ಆಗಸ್ಟ್ 06, 2021 (ಕರಾವಳಿ ಟೈಮ್ಸ್) : ಸಿಇಟಿ ಪರೀಕ್ಷೆ ಆಗಸ್ಟ್ 28 ಹಾಗೂ 29 ರಂದು ನಡೆಯಲಿದ್ದು, ಈ ಬಗ್ಗೆ ಈಗಾಗಲೇ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶುಲ್ಕ ಪಾವತಿಯ ವಿವರಗಳ ಬಗ್ಗೆ ಹಾಗೂ ಪರೀಕ್ಷಾ ಕೇಂದ್ರಗಳ ಬಗ್ಗೆ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟಿನಲ್ಲಿ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಈ ಬಗ್ಗೆ ಪರೀಕ್ಷಾ ಪ್ರಾಧಿಕಾರದ ವೈಬ್ ಸೈಟ್ kea.kar.nic.in ಗೆ ಭೇಟಿ ನೀಡಿ ಪರಿಶೀಲಿಸಬಹುದು ಎಂದು ಕೆಇಎ ಪ್ರಕಟಣೆ ತಿಳಿಸಿದೆ.
6 August 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment