ಬೆಂಗಳೂರು, ಆಗಸ್ಟ್ 15, 2021 (ಕರಾವಳಿ ಟೈಮ್ಸ್) : ದೇಶದ ಸ್ವಾತಂತ್ರ್ಯೋತ್ಸವ ದಿನ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಕೂಡಾ ರಾಜ್ಯದ ಜನರಿಗೆ ಕೆಲ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ರಾಜ್ಯದ ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ಸರಬರಾಜು, ಶೇ. 100ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರ ವಿದ್ಯುತ್ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಸುಸಜ್ಜಿತವಾದ ಶಾಲೆಗಳನ್ನು ಸ್ಥಾಪಿಸಿ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.
ಅದೇ ರೀತಿ ರಾಜ್ಯದ ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ವಸತಿ ರಹಿತ ಮತ್ತು ಆಶ್ರಯ ರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದಿದ್ದಾರೆ. ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪೆÇ್ರೀತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ, ಪ್ರತಿ ಸಂಸ್ಥೆಗೆ 30 ಲಕ್ಷ ರೂಪಾಯಿಯಂತೆ ಮೂರು ವರ್ಷದ ಅವಧಿಗೆ 225 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದರು.
ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂಪಾಯಿಗಳಂತೆ 75 ಕೋಟಿ ರೂಫಐಈಗಳನ್ನು ವೆಚ್ಚ ಮಾಡಲಾಗುವುದು ಎಂದ ಸಿಎಂ ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂಪಾಯಿಯಂತೆ 7.5 ಕೋಟಿ ರೂಪಾಯಿ ಹಣ ವಿನಿಯೋಗಿಸಲಾಗುವುದು ಎಂದಿದ್ದಾರೆ.
ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂಪಾಯಿಯಂತೆ 75 ಕೋಟಿ ರೂಪಾಯಿ ಬೀಜ ಧನವನ್ನು (ಸೀಡ್ ಮನಿ) ಒದಗಿಸಲಾಗುವುದು ಎಂದ ಬೊಮ್ಮಾಯಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ಆಯ್ದ 750 ರಚನಾತ್ಮಕ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ಸಾಮುದಾಯಿಕ ಪ್ರೇರೇಪಿಸಲಾಗುವುದು. ಈ ಯೋಜನೆಯಲ್ಲಿ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ತೊಡಗಿಸಿಕೊಂಡು ಸಮುದಾಯದ ಅಭಿವೃದ್ಧಿ ಮಾಡುವುದು ಗುರಿಯಾಗಿದೆ. ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಗೆ ಕಾಯಕಲ್ಪ ಕೊಡಲು ಯೋಜನೆ ಘೋಷಣೆ ಮಾಡಿದ್ದಾರೆ.
ಆಯ್ದ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ತಲಾ 20 ಲಕ್ಷ ರೂಪಾಯಿಗಳಂತೆ 150 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ 75 ಸಾವಿರ ಯುವಕ ಯುವತಿಯರ ಕೌಶಲ್ಯಾಭಿವೃದ್ಧಿಗೆ 2 ವರ್ಷಗಳ ತರಬೇತಿ ಯೋಜನೆಯನ್ನು 12 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.
ಟೋಕಿಯೋ ಒಲಂಪಿಕ್ಸ್‍ನಲ್ಲಿ ಭಾರತದ ಮತ್ತು ಕರ್ನಾಟಕದ ಕ್ರೀಡಾ ಪಟುಗಳ ಸಾಧನೆ ಗಮನಾರ್ಹವಾದುದು. ಮುಂದಿನ ಪ್ಯಾರೀಸ್ ಒಲಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಪದಕ ವಿಜೇತ ಸಾಮರ್ಥ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಅಗತ್ಯವಾದ ತರಬೇತಿ ಮತ್ತು ಪೆÇ್ರೀತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದ ಅವರು ನಗರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂಪಾಯಿಯಂತೆ 75 ಕೋಟಿ ರೂಪಾಯಿಗಳನ್ನು ಒದಗಿಸುವ ಘೊಷಣೆಯನ್ನು ಸಿಎಂ ಮಾಡಿದ್ದಾರೆ.















































0 comments:
Post a Comment