ಬಂಟ್ವಾಳ, ಆಗಸ್ಟ್ 15, 2021 (ಕರಾವಳಿ ಟೈಮ್ಸ್) : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ ಸಿ ರೋಡು ಮಿನಿ ವಿಧಾನಸೌಧದ ಮುಂಭಾಗದಲ್ಲಿ ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಸರಕಾರದ ಕೋವಿಡ್ ಶಿಷ್ಟಾಚಾರದಂತೆ ಸರಳವಾಗಿ ಆಚರಿಸಲಾಯಿತು.
ಶಾಸಕ ಯು ರಾಜೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಧ್ವಜಾರೋಹಣಗೈದರು. ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿ’ಸೋಜ, ಬುಡಾ ಅಧ್ಯಕ್ಷ ಬಿ ದೇವದಾಸ ಶೆಟ್ಟಿ, ತಾ ಪಂ ಇಒ ರಾಜಣ್ಣ, ಬಿಇಒ ಜ್ಞಾನೇಶ್ ಹಾಗೂ ತಾಲೂಕು ಕಛೇರಿಯ ಸಿಬ್ಬಂದಿಗಳು ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.














































0 comments:
Post a Comment