ಕಾರಿಂಜ ಜನಜಾಗೃತಿ ಸಭೆಯಲ್ಲಿ ಜಿಲ್ಲಾಧಿಕಾರಿಗೆ ಧಮ್ಕಿ : ಜಗಧೀಶ ಕಾರಂತ್ ವಿರುದ್ದ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಕಾರಿಂಜ ಜನಜಾಗೃತಿ ಸಭೆಯಲ್ಲಿ ಜಿಲ್ಲಾಧಿಕಾರಿಗೆ ಧಮ್ಕಿ : ಜಗಧೀಶ ಕಾರಂತ್ ವಿರುದ್ದ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

24 November 2021

ಕಾರಿಂಜ ಜನಜಾಗೃತಿ ಸಭೆಯಲ್ಲಿ ಜಿಲ್ಲಾಧಿಕಾರಿಗೆ ಧಮ್ಕಿ : ಜಗಧೀಶ ಕಾರಂತ್ ವಿರುದ್ದ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ನವೆಂಬರ್ 24, 2021 (ಕರಾವಳಿ ಟೈಮ್ಸ್) : ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ರಥ ಬೀದಿಯಲ್ಲಿ ಭಾನುವಾರ ನಡೆದ ರುದ್ರಗಿರಿಯ ರಣಕಹಳೆ ಎಂಬ ಜನಜಾಗೃತಿ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ದ ಡೀಸಿ ಡಾ ರಾಜೇಂದ್ರ ಕೆ ವಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. 

ನವೆಂಬರ್ 21 ರಂದು ಸಂಜೆ  ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಕಾರಿಂಜ ರಥಬೀದಿಯಲ್ಲಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಇದರ ವತಿಯಿಂದ ರುದ್ರಗಿರಿಯ ರಣಕಹಳೆ ಎಂಬ ಬೃಹತ್ ಜನಜಾಗೃತಿ ಸಭೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ ರಾಜೇಂದ್ರ ಕೆ ವಿ ಐಎಎಸ್ ಅವರನ್ನುದ್ದೇಶಿಸಿ, ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21 ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21ಕ್ಕೆ ಎಲ್ಲರೂ ಸಿದ್ದರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿಗಳ ಕಛೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿಯನ್ನು ಹಿಡಿಯುತ್ತೀವಿ. ತಾಕತ್ತಿದ್ದರೆ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸೋ.. ಇಲ್ಲವಾದರೇ ಟ್ರಾನ್ಸ್ ಫರ್ ತೆಗೆದುಕೊಂಡು ಹೋಗೋ.. ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು  ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪರಾಧಕ್ಕೆ ದುಷ್ಪ್ರೇರಣೆ ನೀಡಿರುತ್ತಾರೆ. 

ಜಗದೀಶ್ ಕಾರಂತ್ ಅವರು ಅಪರಾಧಿಕ ಕೃತ್ಯವನ್ನು ಎಸಗುವ ಮನೋಧೋರಣೆ ಹೊಂದಿ ಪ್ರಚೋದಾನಾಧಿಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧಿಕ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಧಿಕಾ ಭೀತಿಯನ್ನುಂಟು ಮಾಡಿರುತ್ತಾರೆ. ಹಾಗೂ ಅಪರಾಧ ಕೃತ್ಯ ನಡೆಸಲು ಪ್ರೇರಣೆಯನ್ನು ಮತ್ತು ಬೆದರಿಕೆಯನ್ನೊಡ್ಡಿದ್ದು, ಡಿಸೆಂಬರ್ 21 ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಛೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಗಳ ಕೊರಳಪಟ್ಟಿ ಹಿಡಿಯಿರಿ ಎಂದು ಪ್ರಚೋದಿಸುವ ಮೂಲಕ ಸಾರ್ವಜನಿಕ ನೌಕರಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಹಾನಿ ಮತ್ತು ಹಲ್ಲೆ ಮಾಡಲು  ಪ್ರಚೋದಿಸಿ  ಬೆದರಿಕೆ ಹಾಕಿರುವುದು ಎಂಬಿತ್ಯಾದಿಯಾಗಿ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 84/2021 ಕಲಂ 153, 117, 504, 506, 189 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಾರಿಂಜ ಜನಜಾಗೃತಿ ಸಭೆಯಲ್ಲಿ ಜಿಲ್ಲಾಧಿಕಾರಿಗೆ ಧಮ್ಕಿ : ಜಗಧೀಶ ಕಾರಂತ್ ವಿರುದ್ದ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top