ಬಂಟ್ವಾಳ, ನವೆಂಬರ್ 14, 2021 (ಕರಾವಳಿ ಟೈಮ್ಸ್) : ತಾಲೂಕಿನ ತುಂಬೆ ಗ್ರಾಮದ ರಾಮಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಕ್ಯಾಟರಿಂಗ್ ಆಹಾರ ಸಾಗಾಟದ ಪಿಕಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಹಾಗೂ ಆಶಿತ್ (21) ದಾರುಣವಾಗಿ ಮೃತಪಟ್ಟಿದ್ದು, ಸುದೀಪ್ ಹಾಗೂ ಸಿಂಚನ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರು ಕಡೆಯಿಂದ ಕಾರ್ಯಕ್ರಮ ಮುಗಿಸಿ ವಾಪಾಸ್ಸು ಬರುತ್ತಿದ್ದ ವೇಳೆ ತುಂಬೆ ಸಮೀಪದ ರಾಮಲಕಟ್ಟೆಯಲ್ಲಿ ಪಿಕಪ್ ವಾಹನ ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನದ ಹಿಂಭಾಗದಲ್ಲಿದ್ದ ಕ್ಯಾಟರಿಂಗ್ ನೌಕರರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಹಾಗೂ ಆಶಿತ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment