ಬಂಟ್ವಾಳ, ಡಿಸೆಂಬರ್ 26, 2021 (ಕರಾವಳಿ ಟೈಮ್ಸ್) : ತಾಲೂಕಿನ ಪುದು ಗ್ರಾಮ ಪಂಚಾಯತಿನ 6ನೇ ವಾರ್ಡಿನಲ್ಲಿ ತೆರವಾಗಿದ್ದ ಸ್ಥಾನಕ್ಕೆ ಎದುರಾಳಿ ಅಭ್ಯರ್ಥಿ ಇಲ್ಲದ ಕಾರಣ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರಿಮತಿ ನಳಿನಾಕ್ಷಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಈ ಮೂಲಕ ಪುದು ಪಂಚಾಯತಿನಲ್ಲಿ ಈ ಹಿಂದೆ ಕೈ ಬೆಂಬಲಿತ ಸದಸ್ಯೆ ಲಕ್ಷ್ಮಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನವನ್ನು ಮತ್ತೆ ಕಾಂಗ್ರೆಸ್ ನಾಯಕರು ತಮ್ಮ ತೆಕ್ಕೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 34 ಸಂಖ್ಯಾಬಲದ ಪಂಚಾಯತಿನಲ್ಲಿ ಕಾಂಗ್ರೆಸ್ ಬೆಂಬಲಿತರು 27 ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ.
ಮಾಜಿ ಸಚಿವ, ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರ ಅಭಿವೃದ್ದಿ ಕಾರ್ಯಗಳು ಹಾಗೂ ಪಂಚಾಯತ್ ಆಡಳಿತದ ಜನಪರ ಸೇವಾ ಕಾರ್ಯಗಳು ಈ ಅವಿರೋಧ ಆಯ್ಕೆಗೆ ಪ್ರಮುಖ ಕಾರಣ ಎಂದು ಜಿ ಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಹಾಗೂ ಪುದು ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರು ವಿಶ್ಲೇಷಿದ್ದಾರೆ.
ಅವಿರೋಧವಾಗಿ ಪಂಚಾಯತಿಗೆ ಆಯ್ಕೆಯಾದ ಶ್ರೀಮತಿ ನಳಿನಾಕ್ಷಿ ಅವರಿಗೆ ಪುದು ಗ್ರಾ ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲೀಡಿಯಾ ಪಿಂಟೋ, ಜಿ ಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ತಾ ಪಂ ಮಾಜಿ ಸದಸ್ಯ ಆಸಿಫ್ ಇಕ್ಬಾಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಪೇರಿಮಾರ್, ಡಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಇಕ್ಬಾಲ್ ಸುಜೀರು, ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಇಂತಿಯಾಝ್ ತುಂಬೆ ಸಹಿತ ಪುದು ಪಂಚಾಯತಿನ ಕೈ ಬೆಂಬಲಿತ ಎಲ್ಲಾ ಸದಸ್ಯರು ಹಾಗೂ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.
0 comments:
Post a Comment