ಬೆಂಗಳೂರು, ಜನವರಿ 18, 2022 (ಕರಾವಳಿ ಟೈಮ್ಸ್) : ಈ ಬಾರಿಯ ಅಂದರೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದ್ದು, ಎಪ್ರಿಲ್ 16 ರಿಂದ ಮೇ 4ರ ವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಎಪ್ರಿಲ್ 16ರಂದು ಗಣಿತ, ಶಿಕ್ಷಣ, ಮೂಲ ಗಣಿತ, ಎಪ್ರಿಲ್ 18ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ, ಎಪ್ರಿಲ್ 19 ರಂದು ಮಾಹಿತಿ ತಂತ್ರಜ್ಞಾನ, ಎಪ್ರಿಲ್ 20ರಂದು ಇತಿಹಾಸ, ಭೌತಶಾಸ್ತ್ರ, ಎಪ್ರಿಲ್ 21ರಂದು ದ್ವಿತೀಯ ಭಾಷೆ, ಎಪ್ರಿಲ್ 22ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಎಪ್ರಿಲ್ 23ರಂದು ರಾಸಾಯನಶಾಸ್ತ್ರ, ಮನಃಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಎಪ್ರಿಲ್ 25ರಂದು ಅರ್ಥಶಾಸ್ತ್ರ, ಎಪ್ರಿಲ್ 26ರಂದು ಹಿಂದಿ, ಎಪ್ರಿಲ್ 28ರಂದು ಐಚ್ಛಿಕ ಕನ್ನಡ, ಅಕೌಂಟ್ಸ್, ಭೂವಿಜ್ಞಾನ, ಎಪ್ರಿಲ್ 29ರಂದು ಕನ್ನಡ, ಎಪ್ರಿಲ್ 30ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಮೇ 2 ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ ಹಾಗೂ ಮೇ 4 ರಂದು ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದು ಪಿಯು ಬೋರ್ಡ್ ಪ್ರಕಟಣೆ ತಿಳಿಸಿದೆ.
0 comments:
Post a Comment