ನಾಳೆ (ಫೆಬ್ರವರಿ 27) ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ - Karavali Times ನಾಳೆ (ಫೆಬ್ರವರಿ 27) ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ - Karavali Times

728x90

25 February 2022

ನಾಳೆ (ಫೆಬ್ರವರಿ 27) ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ

ಬೆಂಗಳೂರು, ಫೆಬ್ರವರಿ 26, 2022 (ಕರಾವಳಿ ಟೈಮ್ಸ್) : ರಾಜ್ಯಾದ್ಯಂತ ನಾಳೆ (ಫೆಬ್ರವರಿ 27 ಭಾನುವಾರ) ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಶೇ. 100ರಷ್ಟು ಯಶಸ್ಸಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ಕೆಲವು ನೆರೆ ರಾಷ್ಟ್ರಗಳಲ್ಲಿ ಪಲ್ಸ್ ಪೋಲಿಯೋ ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ನಮ್ಮ ದೇಶದಲ್ಲೂ ಇದೇ 27 ರಿಂದ ಮಾ. 3ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ನೂರರಷ್ಟು ಯಶಸ್ಸಿಗೆ ನಾವು ಸಿದ್ಧರಾಗಿದ್ದು, ಸಾರ್ವಜನಿಕ ಆರೋಗ್ಯ ಇಲಾಖೆ ಯೋಜನೆಯಡಿ 141 ಯೋಜನಾ ಘಟಕಗಳಲ್ಲಿ 3400 ಬೂತ್‍ಗಳ ಮೂಲಕ ಎಲ್ಲ 198 ವಾರ್ಡ್‍ಗಳಲ್ಲೂ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು ಎಂದರು. 

ಅಂಗನವವಾಡಿ ಕೇಂದ್ರಗಳು, ಶಾಲೆಗಳು, ಮಾರುಕಟ್ಟೆ, ಮೆಟ್ರೋ ನಿಲ್ದಾಣ, ಉದ್ಯಾನವನಗಳು, ಕೊಳಚೆ ಪ್ರದೇಶಗಳು ಸೇರಿದಂತೆ ಎಲ್ಲ ಜನನಿಬಿಡ ಪ್ರದೇಶಗಳಲ್ಲೂ ಮೊಬೈಲ್ ಮತ್ತು ಸ್ಥಿರ ಬೂತ್‍ಗಳನ್ನು ಸ್ಥಾಪಿಸುವ ಮೂಲಕ ಅವಶ್ಯಕತೆಯಿರುವ 10,80,000 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು ಎಂದವರು ಹೇಳಿದರು.

ಜನರಿಗೆ ಪಲ್ಸ್ ಪೋಲಿಯೋ ಲಸಿಕೆ ಬಗ್ಗೆ ಕಸ ವಿಲೇವಾರಿ ವಾಹನಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ನಮ್ಮ ಈ ಕಾರ್ಯಕ್ರಮದಲ್ಲಿ ಅದಮ್ಯ ಚೇತನ, ಅಕ್ಷಯ ಪಾತ್ರ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಪಾಲ್ಗೊಳ್ಳುತ್ತಿದ್ದು, ಒಟ್ಟಾರೆ 15 ಸಾವಿರಕ್ಕೂ ಹೆಚ್ಚು ಮಂದಿ ಪಲ್ಸ್ ಪೋಲಿಯೋ ಕರ್ತವ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದವರು ವಿವರಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ನಾಳೆ (ಫೆಬ್ರವರಿ 27) ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ Rating: 5 Reviewed By: karavali Times
Scroll to Top