ಫೆ 19 ರಂದು ಬಾಳ್ತಿಲ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ - Karavali Times ಫೆ 19 ರಂದು ಬಾಳ್ತಿಲ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ - Karavali Times

728x90

16 February 2022

ಫೆ 19 ರಂದು ಬಾಳ್ತಿಲ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ

 ಬಂಟ್ವಾಳ, ಫೆಬ್ರವರಿ 17, 2022 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ನಿರ್ದೇಶನದಂತೆ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿಯಲ್ಲಿರುವ ಗ್ರಾ ಪಂ ಸಭಾಂಗಣದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ 19 ರಂದು ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. 

 ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಲಿದ್ದು, ಕಂದಾಯ ಹಾಗೂ ಇತರ ಇಲಾಖೆಗಳ ಸವಲತ್ತು ವಿತರಣೆ, ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. 

 ಬಾಳ್ತಿಲ ಗ್ರಾಮದ ಸಾರ್ವಜನಿಕರ ಯಾವುದಾದರೂ ಸಮಸ್ಯೆ, ದೂರುಗಳಿದ್ದಲ್ಲಿ ಗ್ರಾಮ‌ ಪಂಚಾಯತ್ ದೂರು‌ ಪೆಟ್ಟಿಗೆ, ಸ್ಥಳೀಯ ಗ್ರಾಮಕರಣಿಕರು ಅಥವಾ ತಾಲೂಕು ಕಚೇರಿಗೆ ಫೆ 18 ರೊಳಗೆ ಖುದ್ದಾಗಿ ಸಲ್ಲಿಸಬಹುದು. ಗ್ರಾಮಸ್ಥರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದರ.

  • Blogger Comments
  • Facebook Comments

0 comments:

Post a Comment

Item Reviewed: ಫೆ 19 ರಂದು ಬಾಳ್ತಿಲ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ Rating: 5 Reviewed By: karavali Times
Scroll to Top