ಜೂನ್ 16, 17 ಹಾಗೂ 18 ರಂದು ಸಿಇಟಿ ಪರೀಕ್ಷೆ : ದಿನಾಂಕ ಘೋಷಿಸಿದ ಸಚಿವ ಅಶ್ವತ್ಥ ನಾರಾಯಣ - Karavali Times ಜೂನ್ 16, 17 ಹಾಗೂ 18 ರಂದು ಸಿಇಟಿ ಪರೀಕ್ಷೆ : ದಿನಾಂಕ ಘೋಷಿಸಿದ ಸಚಿವ ಅಶ್ವತ್ಥ ನಾರಾಯಣ - Karavali Times

728x90

28 March 2022

ಜೂನ್ 16, 17 ಹಾಗೂ 18 ರಂದು ಸಿಇಟಿ ಪರೀಕ್ಷೆ : ದಿನಾಂಕ ಘೋಷಿಸಿದ ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು, ಮಾರ್ಚ್ 28, 2022 (ಕರಾವಳಿ ಟೈಮ್ಸ್) : ವೃತ್ತಿ ಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಈ ವರ್ಷ ಜೂನ್ 16, 17 ಮತ್ತು 18 ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೇರೆ ಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಜೂನ್ 16 ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17 ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ ಜೂನ್ 18 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ನಡೆಸಲು ಉದ್ದೇಶಿಸಲಾಗಿದೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಎಪ್ರಿಲ್ 5 ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಎ. 22 ರವರೆಗೆ ಅವಕಾಶವಿದೆ.

ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲೇನಾದರೂ ಮಾಹಿತಿಯನ್ನು ಪರಿಷ್ಕರಿಸುವುದಿದ್ದರೆ ಅಂತಹವರಿಗೆ ಮೇ 2 ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30 ರಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ವಿವರಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಜೂನ್ 16, 17 ಹಾಗೂ 18 ರಂದು ಸಿಇಟಿ ಪರೀಕ್ಷೆ : ದಿನಾಂಕ ಘೋಷಿಸಿದ ಸಚಿವ ಅಶ್ವತ್ಥ ನಾರಾಯಣ Rating: 5 Reviewed By: karavali Times
Scroll to Top