ಮತೀಯ ದ್ವೇಷದ ಕೊಲೆಗೆ ಸರಕಾರದಿಂದ 25 ಲಕ್ಷ ಪರಿಹಾರ ಪ್ರಶ್ನಿಸಿದ ಕೈ ಶಾಸಕ : ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರಕಾರ ಎಂದು ಕುಟುಕಿದ ಪ್ರಿಯಾಂಕ್ ಖರ್ಗೆ - Karavali Times ಮತೀಯ ದ್ವೇಷದ ಕೊಲೆಗೆ ಸರಕಾರದಿಂದ 25 ಲಕ್ಷ ಪರಿಹಾರ ಪ್ರಶ್ನಿಸಿದ ಕೈ ಶಾಸಕ : ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರಕಾರ ಎಂದು ಕುಟುಕಿದ ಪ್ರಿಯಾಂಕ್ ಖರ್ಗೆ - Karavali Times

728x90

10 March 2022

ಮತೀಯ ದ್ವೇಷದ ಕೊಲೆಗೆ ಸರಕಾರದಿಂದ 25 ಲಕ್ಷ ಪರಿಹಾರ ಪ್ರಶ್ನಿಸಿದ ಕೈ ಶಾಸಕ : ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರಕಾರ ಎಂದು ಕುಟುಕಿದ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಮಾರ್ಚ್ 10, 2022 (ಕರಾವಳಿ ಟೈಮ್ಸ್) : ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಾದ ಹಿನ್ನೆಲೆಯಲ್ಲಿ ಆತನ ಕುಟುಂಬಕ್ಕೆ ರಾಜ್ಯ ಸರಕಾರ 25 ಲಕ್ಷ ರೂಪಾಯಿ ಪರಿಹಾರ ಕೊಟ್ಟಿರುವ ಕ್ರಮವನ್ನು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸರಣಿ ಟ್ವೀಟ್ ಮೂಲಕ ಸರಕಾರವನ್ನು ಪ್ರಶ್ನಿಸಿದ್ದಾರೆ.

ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಿದ ಸರಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‍ಗೆ ಎಷ್ಟು ನೀಡಿದೆ? ಎಂದವರು ಪ್ರಶ್ನಿಸಿದ್ದಾರೆ. 

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ನಡೆದ ನಂತರ, ಆತನ ಕುಟುಂಬಕ್ಕೆ ಸರಕಾರದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗಿತ್ತು. ಖುದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ಅವರು ಮನೆಗೆ ಹೋಗಿ ಹರ್ಷನ ಕುಟುಂಬಕ್ಕೆ ಚೆಕ್ ನೀಡಿ ಬಂದಿದ್ದರು.

ಈ ಬಗ್ಗೆ ಸರಣಿಯಾಗಿ ಟ್ವೀಟ್ ಮಾಡಿಕೊಂಡಿರುವ ಶಾಸಕ ಪ್ರಿಯಾಂಕ್ ಖರ್ಗೆ, ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿದ್ದಾರೆ. 

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ರಾಜ್ಯ ಸರಕಾರ 25 ಲಕ್ಷ ರೂಪಾಯಿ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಯಾವ ನಿಯಮಗಳಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರೆಲ್ಲರಿಗೂ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರಕಾರ?

ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದು ಬಂದಿದೆ. 2020ರಲ್ಲಿ ಇವರದ್ದೇ ಸರಕಾರ ಆತನನ್ನು ಜೈಲಿಗಟ್ಟಿತ್ತು. ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯಣ ಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ. ಪೆÇಲೀಸರ ತನಿಖಾ ವರದಿಯೂ ಬಂದಿಲ್ಲ. ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ?

ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ರೂಪಾಯಿ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕೆ ಕೊಡಲಿಲ್ಲ, ಭಜರಂಗದಳದವರಿಂದ ಹತ್ಯೆಯಾದ ಸಮೀರ್ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಮೃತರಾದ ಕೊಡಗಿನ ಯೋಧನ ಕುಟುಂಬಕ್ಕೆ ಏಕೆ ಕೊಡಲಿಲ್ಲ? ಕನಿಷ್ಠ ಸಾಂತ್ವನವೂ ಹೇಳಲಿಲ್ಲವೇಕೆ?

ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ ವಿವೇಚನೆಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ರೂಪಾಯಿ ನೀಡಿದ ಸರಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‍ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮತೀಯ ದ್ವೇಷದ ಕೊಲೆಗೆ ಸರಕಾರದಿಂದ 25 ಲಕ್ಷ ಪರಿಹಾರ ಪ್ರಶ್ನಿಸಿದ ಕೈ ಶಾಸಕ : ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರಕಾರ ಎಂದು ಕುಟುಕಿದ ಪ್ರಿಯಾಂಕ್ ಖರ್ಗೆ Rating: 5 Reviewed By: karavali Times
Scroll to Top