ಬೆಂಗಳೂರು, ಮಾರ್ಚ್ 04, 2022 (ಕರಾವಳಿ ಟೈಮ್ಸ್) : ಕರ್ನಾಟಕ ಅಲ್ಪಸಂಖ್ಯಾತ ಇಲಾಖೆಯು ಎಸ್.ಎಸ್.ಪಿ. (ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ) ದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಸಲ್ಲಿಸಿರುವ/ ಸಲ್ಲಿಸುವ ವಿದ್ಯಾರ್ಥಿಗಳಿ, ವಿದ್ಯಾರ್ಥಿ ಪೋಷಕರಿಗೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರಿಗೆ ಮಹತ್ವ ಮಾಹಿತಿ ನೀಡುತ್ತಿದ್ದು, ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಜೊತೆ ಆಧಾರ್ ಸಂಖ್ಯೆ ಲಿಂಕ್ ಹಾಗೂ ಸೀಡಿಂಗ್ ಮಾಡಬೇಕಾಗಿರುವುದು ಕಡ್ಡಾಯವಾಗಿದೆ. ಲಿಂಕ್ ಮಾಡದ ವಿದ್ಯಾರ್ಥಿಗಳು ತಕ್ಷಣ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಲಿಂಕ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಲು ಮಾರ್ಚ್ 15, 2022 ಕೊನೆ ದಿನಾಂಕವಾಗಿದ್ದು, ಅದಕ್ಕಿಂತ ಮುಂಚೆ ಸೀಡಿಂಗ್ ಮಾಡದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರದ್ದಾಗುವುದು ಎಂದು ಮಾಹಿತಿ ನೀಡಿದೆ.
3 March 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment