ಮಾ 15 ರಂದು ಹಿಜಾಬ್ ತೀರ್ಪು ಹಿನ್ನಲೆ : ಅವಿಭಜಿತ ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ - Karavali Times ಮಾ 15 ರಂದು ಹಿಜಾಬ್ ತೀರ್ಪು ಹಿನ್ನಲೆ : ಅವಿಭಜಿತ ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ - Karavali Times

728x90

14 March 2022

ಮಾ 15 ರಂದು ಹಿಜಾಬ್ ತೀರ್ಪು ಹಿನ್ನಲೆ : ಅವಿಭಜಿತ ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು, ಮಾರ್ಚ್ 14, 2022 (ಕರಾವಳಿ ಟೈಮ್ಸ್) : ಹಿಜಾಬ್ ಧಾರಣೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ಬಗ್ಗೆ ಮಂಗಳವಾರ (ಮಾ 15) ಹೈಕೋರ್ಟ್ ತೀರ್ಪು ಪ್ರಕಟಿಸುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶ ನೀಡಿದ್ದಾರೆ. 

ಜಿಲ್ಲೆಯಲ್ಲಿ ಭದ್ರತೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ, ಪೂರ್ವ ಪ್ರಾಥಮಿಕ ತರಗತಿಯಿಂದ ಉನ್ನತ ಶಿಕ್ಷಣದವರೆಗೂ ಎಲ್ಲಾ ತರಗತಿಗಳಿಗೆ ಈ ರಜಾ ಆದೇಶ ಅನ್ವಯವಾಗಲಿದೆ ಎಂದು ಡೀಸಿ ಆದೇಶ ತಿಳಿಸಿದೆ. ಮಂಗಳವಾರ ನಿಗದಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. 

ಇದೇ ವೇಳೆ ಉಡುಪಿ ಜಿಲ್ಲಾಧಿಕಾರಿ ಕೂಡಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು  ಈ ಬಗ್ಗೆ ಸೋಮವಾರ ಆದೇಶ ಹೊರಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಾ 15 ರಂದು ಹಿಜಾಬ್ ತೀರ್ಪು ಹಿನ್ನಲೆ : ಅವಿಭಜಿತ ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Rating: 5 Reviewed By: karavali Times
Scroll to Top