ಬಂಟ್ವಾಳ, ಮಾರ್ಚ್ 01, 2022 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಸಂತೆಕಟ್ಟೆ ಬಳಿ ಮಂಗಳವಾರ ಬೆಳಿಗ್ಗೆ ಸಂತೆ ವ್ಯಾಪಾರಕ್ಕೆ ಸಂಬಂಧಿಸಿ ಬಟ್ಟೆ ಅಂಗಡಿ ಇಡುವ ವಿಚಾರದಲ್ಲಿ ಮಾತಿನ ಚಕಮಕಿ ನಡೆಸಿ ಹೊಡೆದಾಟ ನಡೆಸಿದ ಪ್ರಕರಣದಲ್ಲಿ ಆರೋಪಿಗಳಾದ ಮೊಹಮ್ಮದ್ ಆಲಿ, ಮೊಹಮ್ಮದ್ ಆರೀಪ್ ಹಾಗೂಮಹಮ್ಮದ್ ರವೂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಬೀಟ್ ಪೊಲೀಸರಾದ ಸೋಮಶೇಖರ ಹಾಗೂ ರಾಜೇಶ್ ಅವರು ಮಂಗಳವಾರ ಬೆಳಿಗ್ಗೆ ಕರ್ತವ್ಯದಲ್ಲಿದ್ದ ವೇಳೆ ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟಾಗುವ ರೀತಿ ಹೊಡೆದಾಟ ನಡೆಸಿಕೊಂಡ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಅವರ ವಿರುದ್ದ ಠಾಣಾ ಅಪರಾಧ ಕ್ರಮಾಂಕ 17/2022 ಕಲ 160 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment