ಎಪ್ರಿಲ್ 21 ರಂದು ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಆರೋಗ್ಯ ಮೇಳ - Karavali Times ಎಪ್ರಿಲ್ 21 ರಂದು ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಆರೋಗ್ಯ ಮೇಳ - Karavali Times

728x90

19 April 2022

ಎಪ್ರಿಲ್ 21 ರಂದು ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಆರೋಗ್ಯ ಮೇಳ

ಬಂಟ್ವಾಳ, ಎಪ್ರಿಲ್ 19, 2022 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಡಳಿತ, ದ ಕ ಜಿ ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಇಲಾಖೆ, ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ಎ ಜೆ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮವು ಎಪ್ರಿಲ್ 21 ರಂದು ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. 

ಸಂಸದ ನಳಿನ್ ಕುಮಾರ್ ಕಟೀಲ್ ಮೇಳವನ್ನು ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸುವರು. 

‘ಎಲ್ಲರಿಗೂ ಆರೋಗ್ಯ ಹಾಗೂ ಎಲ್ಲೆಡೆಯೂ ಆರೋಗ್ಯ’ ಎಂಬ ಘೋಷ ವಾಕ್ಯದಡಿ ನಡೆಯುವ ಈ ಮೇಳದಲ್ಲಿ ವಿವಿಧ ವೈದ್ಯರು ಹಾಗೂ ಸೇವಾ ಸೌಲಭ್ಯಗಳು ಲಭ್ಯವಿದ್ದು ಸಾರ್ವಜನಿಕರು ಮೇಳದ ಸದುಪಯೋಗಪಡಿಸಿಕೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಎಪ್ರಿಲ್ 21 ರಂದು ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಆರೋಗ್ಯ ಮೇಳ Rating: 5 Reviewed By: karavali Times
Scroll to Top