ವರ್ಗಾವಣೆಗೊಂಡ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಬೀಳ್ಕೊಡುಗೆ - Karavali Times ವರ್ಗಾವಣೆಗೊಂಡ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಬೀಳ್ಕೊಡುಗೆ - Karavali Times

728x90

8 May 2022

ವರ್ಗಾವಣೆಗೊಂಡ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಬೀಳ್ಕೊಡುಗೆ

ಬಂಟ್ವಾಳ, ಮೇ 08, 2022 (ಕರಾವಳಿ ಟೈಮ್ಸ್) : ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ  ರಶ್ಮಿ ಎಸ್ ಆರ್ ಅವರು ಮಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಬಂಟ್ವಾಳ ತಾಲೂಕಾಡಳಿತದ ಪರವಾಗಿ ಬಂಟ್ವಾಳ ಕಂದಾಯ ಇಲಾಖೆಯ ಸಿಬ್ಬಂದಿಗಳು ಭಾನುವಾರ ಸನ್ಮಾನಿಸಿ ಬೀಳ್ಕೊಟ್ಟರು. 

ಬಿ ಸಿ ರೋಡಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾ ಭವನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ತಹಶೀಲ್ದಾರ್ ರಶ್ಮಿ ಅವರು ಬಂಟ್ವಾಳದಲ್ಲಿ ಜನಾನುರಾಗಿಯಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾದಂತೆ ಮುಂದಿನ ತಮ್ಮ ಇಲಾಖೆಯಲ್ಲೂ ಜಿಲ್ಲಾಮಟ್ಟದಲ್ಲಿ ಅವರ ಕರ್ತವ್ಯ ದಕ್ಷತೆಗೆ ಶ್ರೇಯಸ್ಸು ಲಭಿಸಲಿ ಎಂದು ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಅವರು ಬಂಟ್ವಾಳ ತಾಲೂಕಿನಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತ್ರವಲ್ಲದೆ ಶಾಸಕರು, ಎಲ್ಲಾ ಇಲಾಖೆಯವರು, ಮಾಧ್ಯಮ ಮಿತ್ರರು ಎಲ್ಲರ ಸಹಕಾರದಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು. 

ಈ ಸಂದರ್ಭ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕಾಧ್ಯಕ್ಷ ಉಮಾನಾಥ ರೈ ಮೇರಾವು, ಮೂಡಬಿದ್ರೆ ಉಪತಹಶೀಲ್ದಾರ್ ರಾಮ ಕಾಟಿಪಳ್ಳ, ಈ ಸಂದರ್ಭ ಉಪತಹಶೀಲ್ದಾರ್ ಗಳಾದ ನವೀನ್ ಬೆಂಜನಪದವು, ರಾಜೇಶ್ ನಾಯ್ಕ್, ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ, ಸಂತೋಷ್, ಪ್ರಶಾಂತ್ ಶೆಟ್ಟಿ, ಸಹೋದ್ಯೋಗಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ವರ್ಗಾವಣೆಗೊಂಡ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಬೀಳ್ಕೊಡುಗೆ Rating: 5 Reviewed By: karavali Times
Scroll to Top