ಏಕಲವ್ಯ ಪ್ರಶಸ್ತ ಪುರಸ್ಕøತ ಅಂತರಾಷ್ಟ್ರೀಯ ಕಬಡ್ಡಿ ಪಟು ಮಾಣಿ ಉದಯ ಚೌಟ ನಿಧನ - Karavali Times ಏಕಲವ್ಯ ಪ್ರಶಸ್ತ ಪುರಸ್ಕøತ ಅಂತರಾಷ್ಟ್ರೀಯ ಕಬಡ್ಡಿ ಪಟು ಮಾಣಿ ಉದಯ ಚೌಟ ನಿಧನ - Karavali Times

728x90

21 May 2022

ಏಕಲವ್ಯ ಪ್ರಶಸ್ತ ಪುರಸ್ಕøತ ಅಂತರಾಷ್ಟ್ರೀಯ ಕಬಡ್ಡಿ ಪಟು ಮಾಣಿ ಉದಯ ಚೌಟ ನಿಧನ

 ಬಂಟ್ವಾಳ, ಮೇ 21, 2022 (ಕರಾವಳಿ ಟೈಮ್ಸ್) : ಏಕಲವ್ಯ ಕ್ರೀಡಾ ಪ್ರಶಸ್ತಿ ವಿಜೇತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಕ್ರೀಡಾಪಟು, ಅಂತರಾಷ್ಟ್ರೀಯ ಕಬ್ಬಡ್ಡಿ ಆಟಗಾರ, ಬ್ಯಾಂಕ್ ಆಫ್ ಬರೋಡಾ ಉದ್ಯೋಗಿ ಉದಯ ಚೌಟ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ (ಮೇ 21) ನಿಧನರಾದರು.

ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಇವರು ಪ್ರಸ್ತುತ ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ದ.ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷರೂ ಆಗಿದ್ದ ಇವರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. 2007ರ ಕಬಡ್ಡಿ ವಿಶ್ವಕಪ್ ಪಂದ್ಯಾಕೂಟದಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಇವರ ಕ್ರೀಡಾ ಸಾಧನೆಗಾಗಿ ಪಡೆದುಕೊಂಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಏಕಲವ್ಯ ಪ್ರಶಸ್ತ ಪುರಸ್ಕøತ ಅಂತರಾಷ್ಟ್ರೀಯ ಕಬಡ್ಡಿ ಪಟು ಮಾಣಿ ಉದಯ ಚೌಟ ನಿಧನ Rating: 5 Reviewed By: karavali Times
Scroll to Top