ರಾಜ್ಯದಲ್ಲಿ ಮೇ 16ರಿಂದ ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳು ಆರಂಭ : ಸಚಿವ ನಾಗೇಶ್ - Karavali Times ರಾಜ್ಯದಲ್ಲಿ ಮೇ 16ರಿಂದ ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳು ಆರಂಭ : ಸಚಿವ ನಾಗೇಶ್ - Karavali Times

728x90

12 May 2022

ರಾಜ್ಯದಲ್ಲಿ ಮೇ 16ರಿಂದ ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳು ಆರಂಭ : ಸಚಿವ ನಾಗೇಶ್

ಬೆಂಗಳೂರು, ಮೇ 13, 2022 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಮೇ 16ರಿಂದ ‘ಕಲಿಕಾ ಚೇತರಿಕೆ’ಯೊಂದಿಗೆ ಶಾಲೆಗಳು ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ತಿಳಿಸಿದರು. 

ಕೋವಿಡ್ ಕಾರಣದಿಂದಾಗಿ ಕಳೆದ 2 ವರ್ಷಗಳಿಂದ ಉಂಟಾಗಿರುವ ಕಲಿಕಾ ಹಿನ್ನಡೆಯಲ್ಲಿ ಸರಿದೂಗಿಸಲು ರಾಜ್ಯ ಸರಕಾರ ಹಮ್ಮಿಕೊಂಡಿರುವ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಕೇಂದ್ರ ಸರಕಾರದಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಇತರ ರಾಜ್ಯಗಳಿಗೂ ಕರ್ನಾಟಕದ ಯೋಜನೆ ಮಾದರಿಯಾಗಿದೆ. ಕಲಿಕಾ ಚೇತರಿಕೆ ಯೋಜನೆಯು ವರ್ಷವಿಡೀ ನಡೆಯಲಿದೆ. ಈ ಹಿನ್ನೆಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಘೋಷಿಸಲಾಗಿದೆ ಎಂದು ಸಚಿವ ನಾಗೇಶ್ ತಿಳಿಸಿದರು.

ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಅನುಷ್ಠಾನಗೊಳಿಸಲು ಅಗತ್ಯವಾದ ಸಂಪನ್ಮೂಲಗಳಾದ ವಿದ್ಯಾರ್ಥಿಗಳಿಗೆ ಕಲಿಕಾ ಹಾಳೆ ಮತ್ತು ಶಿಕ್ಷಕರ ಕೈಪಿಡಿಯನ್ನು ಶಿಕ್ಷಣ ಇಲಾಖೆಯ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗುತ್ತದೆ. ಅಲ್ಲದೇ, ಶಿಕ್ಷಣ ಸಂಸ್ಥೆಗಳು ಬಯಸಿದರೆ ಅಗತ್ಯ ತರಬೇತಿಯನ್ನು ನೀಡಲು ಶಿಕ್ಷಣ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು. 

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶವನ್ನು ಮೇ ಮೂರನೇ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ಮೇ 16ರಿಂದ ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳು ಆರಂಭ : ಸಚಿವ ನಾಗೇಶ್ Rating: 5 Reviewed By: karavali Times
Scroll to Top