ರಾಜ್ಯ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನ - Karavali Times ರಾಜ್ಯ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನ - Karavali Times

728x90

4 June 2022

ರಾಜ್ಯ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 04, 2022 (ಕರಾವಳಿ ಟೈಮ್ಸ್) : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ವತಿಯಿಂದ 2022-23ನೇ ಸಾಲಿಗೆ ಯೋಜನೆಗಳಾದ ಟ್ಯಾಕ್ಸಿ ಗೂಡ್ಸ್ / ಪ್ಯಾಸೆಂಜರ್ ಆಟೋ, ಶ್ರಮಶಕ್ತಿ ಸಾಲ ಯೋಜನೆ, ಸ್ವಯಂ ಉದ್ಯೋಗ ಯೋಜನೆಗಳಡಿಯಲ್ಲಿ ಅರ್ಹ ಅರ್ಜಿದಾರರಿಂದ ನಿಗಮದ ವೆಬ್ ಸೈಟ್ http://Kmdconline.karnataka.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಲು ಜುಲೈ 15, 2022 ಅಂತಿಮ ದಿನಾಂಕವಾಗಿರುತ್ತದೆ. 

ಟ್ಯಾಕ್ಸಿ ಗೂಡ್ಸ್ / ಪ್ಯಾಸೆಂಜರ್ ಆಟೋ ಯೋಜನೆಯಡಿ ಅರ್ಜಿ ಸಲ್ಲಿಸಲು ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಆಟೋ ರಿಕ್ಷಾ /ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 33 ರಷ್ಟು ಅಥವಾ ಗರಿಷ್ಠ 2.50 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು. ಈ ಯೋಜನೆಯಡಿಯಲ್ಲಿ ಖರೀದಿಸುವ ಪ್ಯಾಸೆಂಜರ್ ಅಟೋ ರಿಕ್ಷಾ ವಾಹನ ಮೌಲ್ಯವು ಕನಿಷ್ಠ ರೂ 2.25 ಲಕ್ಷದಿಂದ 3.50 ಲಕ್ಷ ರೂಪಾಯಿಗಳಾಗಿರತಕ್ಕದ್ದು (ಎಲ್ಲಾ ತೆರಿಗೆಗಳು ಸೇರಿ)

ಈ ಯೋಜನೆಗಿರುವ ಅರ್ಹತೆಗಳೆಂದರೆ, ಅರ್ಜಿದಾರರು ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಾಗಿರಬೇಕು, ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು, ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಕುಟುಂಬದ ಆದಾಯವು 4.5 ಲಕ್ಷಕ್ಕಿಂತ ಮೀರಿರಬಾರದು., ಅರ್ಜಿದಾರರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು, ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ ರಾಜ್ಯ ಸರಕಾರಿ ಉದ್ಯೋಗಿಯಾಗಬಾರದು, ಕಳೆದ 5 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ ಅವಳ ಕುಟುಂಬದ ಸದಸ್ಯರು ಸರಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ (ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಬೇಕಾದ ದಾಖಲೆಗಳು : ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಪ್ರತಿ, ವಾಹನ ಚಾಲನಾ ಪರವಾನಗಿ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ವಾಹನದ ಅಂದಾಜು ದರಪಟ್ಟಿ,  ಸ್ವಯಂ ಘೋಷಣೆ ಪತ್ರ, 


ಶ್ರಮಶಕ್ತಿ ಸಾಲ ಯೋಜನೆಯಡಿ ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರಿಗೆ ತರಬೇತಿ ನೀಡಿ, ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸುವ ಸಲುವಾಗಿ, ನಿಗಮದಿಂದ ಶೇ. 4 ರ ಬಡ್ಡಿದರದಲ್ಲಿ 50 ಸಾವಿರ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಇದರಲ್ಲಿ, ಶೇ. 50ರಷ್ಟು ಸಾಲವನ್ನು 36 ತಿಂಗಳಿನಲ್ಲಿ ಫಲಾನುಭವಿಯು ಮರುಪಾವತಿ ಮಾಡಿದಲ್ಲಿ, ಉಳಿದ ಶೇ. 50ರಷ್ಟು ಹಣವನ್ನು ‘ಬ್ಯಾಕ್‍ಎಂಡ್ ಸಹಾಯಧನ’ವನ್ನಾಗಿ ಪರಿಗಣಿಸಲಾಗುತ್ತದೆ. ಫಲಾನುಭವಿಯು ತಾನು ಪಡೆದ ಸಾಲವನ್ನು 36 ತಿಂಗಳೊಳಗಾಗಿ ಮರುಪಾವತಿ ಮಾಡಲು ವಿಫಲರಾದಲ್ಲಿ ಶೇ. 50ರಷ್ಟು ಬ್ಯಾಕ್‍ಎಂಡ್ ಸಹಾಯಧನವನ್ನು ಸಹ ಸಾಲವೆಂದು ಪರಿಗಣಿಸಲಾಗುತ್ತದೆ.

ಅರ್ಹತೆ : ಅರ್ಜಿದಾರರು ಸರಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು, ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು, ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 4,50,000/- ಗೆ ಮೀರಿರಬಾರದು, ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ ರಾಜ್ಯ ಸರಕಾರಿ ನೌಕರರಾಗಿರಬಾರದು, ಕಳೆದ 5 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ (ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.


ಬೇಕಾಗುವ ದಾಖಲೆಗಳು : ಯೋಜನಾ ವರದಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಸ್ವಯಂ ಘೋಷಣೆ ಪತ್ರ, ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ.


ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು. ಘಟಕ ವೆಚ್ಚದ ಶೇ. 33 ಅಥವಾ ಗರಿಷ್ಠ ಮಿತಿ 1 ಲಕ್ಷದ ಸಹಾಯಧನ ನೀಡಲಾಗುವುದು.

ಅರ್ಹತೆಗಳು : ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು, ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು, ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ರೂ. 81,000/- ಹಾಗೂ ನಗರ ಪ್ರದೇಶದಲ್ಲಿ 1,03,000 ಗೆ ಮೀರಿರಬಾರದು, ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ ರಾಜ್ಯ ಸರ್ಕಾರಿ / ಪಿಎಸ್‍ಯು ಉದ್ಯೋಗಿಯಾಗಿರಬಾರದು,  ಅರ್ಜಿದಾರರು ಕೆಎಂಡಿಸಿಯಲ್ಲಿ ಸುಸ್ತಿದಾರರಾಗಿರಬಾರದು. 

ಬೇಕಾದ ದಾಖಲೆಗಳು : ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಪ್ರತಿ, ಯೋಜನಾ ವರದಿ. 

ಈ ಬಗ್ಗೆ ಹೆಚ್ಚಿವ ವಿವರಗಳಿಗೆ ಜಿಲ್ಲೆಯ ನಿಗಮದ ಕಚೇರಿಗೆ ಸಂಪರ್ಕಿಸಬಹುದು ಅಥವಾ ಇಲಾಖಾ ಹೆಲ್ಪ್ ಲೈನ್ ಸಂಖ್ಯೆ  8277799990ನ್ನು ಸಂಪರ್ಕಿಸಬಹುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನ Rating: 5 Reviewed By: karavali Times
Scroll to Top