ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ 61.88 ಮಂದಿ ತೇರ್ಗಡೆ, ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ಸೆಕೆಂಡ್, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ - Karavali Times ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ 61.88 ಮಂದಿ ತೇರ್ಗಡೆ, ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ಸೆಕೆಂಡ್, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ - Karavali Times

728x90

17 June 2022

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ 61.88 ಮಂದಿ ತೇರ್ಗಡೆ, ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ಸೆಕೆಂಡ್, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು, ಜೂನ್ 18, 2022 (ಕರಾವಳಿ ಟೈಮ್ಸ್) : 2021-22ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇಕಡಾ 61.88 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 

ಬೆಂಗಳೂರಿನಲ್ಲಿಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಶನಿವಾರ (ಜೂನ್ 18) ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ ಒಟ್ಟು 5,99,794 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

ಉತ್ತೀರ್ಣರಾದವರ ಪೈಕಿ ಬಾಲಕಿಯರು ಶೇ. 68.72 ಸಾಧನೆಗೈದರೆ, ಬಾಲಕರು ಶೇ. 55.22 ಸಾಧನೆಗೈದಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶದಲ್ಲಿ ಶೇ 0.6ರಷ್ಟು ಏರಿಕೆ ಕಂಡಿದೆ. ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದ ಸಚಿವ ಬಿ ಸಿ ನಾಗೇಶ್ ಈ ಬಾರಿಯೂ ವಿಜ್ಞಾನ ವಿಭಾಗದಲ್ಲಿ ಫಲಿತಾಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ವಿಜ್ಞಾನ ವಿಭಾಗದಲ್ಲಿ ಶೇ 72.53 ಫಲಿತಾಂಶ ದಾಖಲಾದರೆ, ವಾಣಿಜ್ಯ ವಿಭಾಗದಲ್ಲಿ 64.97 ಶೇಕಡಾ ಹಾಗೂ ಕಲಾ ವಿಭಾಗದಲ್ಲಿ ಶೇ 58.71 ಫಲಿತಾಂಶ ದಾಖಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆ ಶೇ 88.02 ಫಲಿತಾಂಶ ದಾಖಲಿಸುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡರೆ, ಉಡುಪಿ 86.38 ಶೇಕಡಾ ಫಲಿತಾಂಶ ದಾಖಲಿಸಿ ದ್ವಿತೀಯ ಸ್ಥಾನ ಪಡೆದುಕೊಂಡರೆ, 77.14 ಶೇಕಡಾ ಫಲಿತಾಂಶ ದಾಖಲಿಸಿರುವ ವಿಜಯಪುರ ತೃತೀಯ ಸ್ಥಾನ ಪಡೆದುಕೊಂಡಿದೆ. ಚಿತ್ರದುರ್ಗ ಜಿಲ್ಲೆ 49.31 ಶೇಕಡಾ ಫಲಿತಾಂಶ ದಾಖಲಿಸಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು. 

91,106 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದರೆ, 2,14,115 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆ, 68,444 ಮಂದಿ ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 49,301 ಮಂದಿ ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸರಕಾರಿ ಪದವಿಪೂರ್ವ ಕಾಲೇಜುಗಳು ಶೇ 52.84 ಫಲಿತಾಂಶ ದಾಖಲಿಸಿದರೆ, ಅನುದಾನಿತ ಪದವಿಪೂರ್ವ ಕಾಲೇಜುಗಳು 62.05, ಕಾರ್ಪೊರೇಶನ್ ಪದವಿಪೂರ್ವ ಕಾಲೇಜುಗಳು 55.72, ವಿಭಿಜಿತ ಪದವಿಪೂರ್ವ ಕಾಲೇಜುಗಳು 72.96 ಶೇಕಡಾ ಫಲಿತಾಂಶ ದಾಖಲಿಸಿದೆ ಎಂದ ಸಚಿವರು, ಈ ಬಾರಿ ಗಣಿತ ವಿಷಯದಲ್ಲಿ 14 ಸಾವಿರ ಮಂದಿ ವಿದ್ಯಾರ್ಥಿಗಳು 100 ಪೂರ್ಣ ಅಂಕಗಳನ್ನು ಪಡೆದುಕೊಂಡರೆ, ಆಂಗ್ಲ ಭಾಷಾ ವಿಷಯದಲ್ಲಿ ಇಬರು 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕನ್ನಡ ಭಾಷಾ ವಿಷಯದಲ್ಲಿ 563 ಮಂದಿ ವಿದ್ಯಾರ್ಥಿಗಳು 100 ಪೂರ್ಣ ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 

ಪರೀಕ್ಷಾ ಉತ್ತರ ಪತ್ರಿಕೆ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಜೂನ್ 30 ಕೊನೆ ದಿನಾಂಕವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜುಲೈ 13 ಕೊನೆ ದಿನವಾಗಿದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದರು. 

  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ 61.88 ಮಂದಿ ತೇರ್ಗಡೆ, ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ಸೆಕೆಂಡ್, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ Rating: 5 Reviewed By: karavali Times
Scroll to Top