ಬಂಟ್ವಾಳ, ಜೂನ್ 02, 2022 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ನಿವಾಸಿ, ತರಕಾರಿ ಉದ್ಯಮಿ, ಹಿರಿಯ ಕಾಂಗ್ರೆಸ್ ಮುಖಂಡ ಪಿ ಬಿ ಹಾಮದ್ ಹಾಜಿ (73) ಅವರು ಗುರುವಾರ (ಜೂನ್ 2) ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿಯ ಮಾಜಿ ಅಧ್ಯಕ್ಷರೂ, ಹಾಲಿ ಉಪಾಧ್ಯಕ್ಷರೂ ಆಗಿರುವ ಇವರು ಎಸ್ ಕೆ ಎಸ್ ಎಸ್ ಎಫ್ ಪಾಣೆಮಂಗಳೂರು ಶಾಖಾ ಹಿರಿಯ ಸದಸ್ಯರಾಗಿ, ಸಹಚಾರಿ ವಿಭಾಗದ ಅಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ಬಂಗ್ಲೆಗುಡ್ಡೆ ಬೂತ್ ಹಾಲಿ ಅಧ್ಯಕ್ಷ ಸಹಿತ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದ ಇವರು ಸಾಮಾಜಿಕ ರಂಗದಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಆರು ಮಂದಿ ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ದಫನ ಕಾರ್ಯವು ಗುರುವಾರ ಮಧ್ಯಾಹ್ನದ ಬಳಿಕ ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ದಫನ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಗಣ್ಯರ ಸಂತಾಪ
ಪಿ ಬಿ ಅಹ್ಮದ್ ಹಾಜಿ ಅವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ, ರಾಜ್ಯ ಗೇರು ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ ಎಚ್ ಖಾದರ್, ಜಿ ಪಂ ಮಾಜಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಎಸ್ ಮುಹಮ್ಮದ್, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜ, ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರ ಅಬ್ದುಲ್ ರಝಾಕ್ ಕುಕ್ಕಾಜೆ, ಪಾಣೆಮಂಗಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪಿ ಎಸ್ ಮುಹಮ್ಮದ್ ಇಕ್ಬಾಲ್ ಜೆಟಿಟಿ, ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ, ಸಜಿಪಮುನ್ನೂರು ಗ್ರಾ ಪಂ ಮಾಜಿ ಸದಸ್ಯ ಎನ್ ಇದ್ದಿನಬ್ಬ ನಂದಾವರ, ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಹಾಸ್ಕೋ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇರ್ಶಾದ್ ಗುಡ್ಡೆಅಂಗಡಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯದರ್ಶಿ ಶರೀಫ್ ಭೂಯಾ ಮೊದಲಾದವರು ಸಂತಾಪ ಸೂಚಿಸಿದ್ದಾರೆ.
0 comments:
Post a Comment