ನಾಳೆಯಿಂದ (ಜೂನ್ 16) ಯುಜಿಸಿಇಟಿ ಪರೀಕ್ಷೆ ಆರಂಭ : ಹಾಲ್ ಟಿಕೆಟ್ ಜೊತೆಗೆ ಅಧಿಕೃತ ಗುರುತು ಪತ್ರದ ಜೊತೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅಭ್ಯರ್ಥಿಗಳಿಗೆ ಸೂಚನೆ - Karavali Times ನಾಳೆಯಿಂದ (ಜೂನ್ 16) ಯುಜಿಸಿಇಟಿ ಪರೀಕ್ಷೆ ಆರಂಭ : ಹಾಲ್ ಟಿಕೆಟ್ ಜೊತೆಗೆ ಅಧಿಕೃತ ಗುರುತು ಪತ್ರದ ಜೊತೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅಭ್ಯರ್ಥಿಗಳಿಗೆ ಸೂಚನೆ - Karavali Times

728x90

15 June 2022

ನಾಳೆಯಿಂದ (ಜೂನ್ 16) ಯುಜಿಸಿಇಟಿ ಪರೀಕ್ಷೆ ಆರಂಭ : ಹಾಲ್ ಟಿಕೆಟ್ ಜೊತೆಗೆ ಅಧಿಕೃತ ಗುರುತು ಪತ್ರದ ಜೊತೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅಭ್ಯರ್ಥಿಗಳಿಗೆ ಸೂಚನೆ

ಬೆಂಗಳೂರು, ಜೂನ್ 15, 2022 (ಕರಾವಳಿ ಟೈಮ್ಸ್) : ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಾಳೆಯಿಂದ (ಜೂನ್ 16 ರಿಂದ 18ರವರೆಗೆ ನಡೆಯಲಿದೆ. 

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು, ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶು ವೈದ್ಯಕೀಯ, ಫಾರ್ಮಸಿ ಮೊದಲಾದ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯುವುದಕ್ಕೆ ಸಿಇಟಿ ಪರೀಕ್ಷೆ ಎರಡು ದಿನಗಳ ಕಾಲ ನಡೆಯಲಿದೆ. ಒಟ್ಟು 486 ಕೇಂದ್ರಗಳಲ್ಲಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಎದುರಿಸಲಿದ್ದಾರೆ. ಜೂನ್ 16 ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿದ್ದು, ಜೂನ್ 17ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. 18ರಂದು ಬೆಳಗ್ಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಬಾರಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿಯೂ ಪ್ರಶ್ನೆ ಮತ್ತು ಉತ್ತರಗಳನ್ನು ನೀಡಲಾಗುವುದು ಎಂದರು. 

ವಿದ್ಯಾರ್ಥಿಗಳು ತಮ್ಮ ಸಿಇಟಿ ಹಾಲ್ ಟಿಕೆಟ್ ಜೊತೆಗೆ ಯಾವುದಾದರೊಂದು ಅಧಿಕೃತ ಗುರುತು ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಿದೆ. ಕಾಲೇಜು ಐಡೆಂಟಿಟಿ ಕಾರ್ಡ್, ಕೆಎಸ್‍ಆರ್‍ಟಿಸಿ ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/ 12ನೇ ತರಗತಿಯ ಹಾಲ್ ಟಿಕೆಟ್ ಇವೇ ಮೊದಲಾದ ಯಾವುದಾದರೊಂದು ಗುರುತು ಪತ್ರ ಜೊತೆಗಿರಬೇಕು ಎಂದ ಸಚಿವ ಅಶ್ವತ್ಥ ನಾರಾಯಣ ಅಕ್ರಮಗಳು ಘಟಿಸದಂತೆ ತಡೆಯುವ ಸಲುವಾಗಿ ಪ್ರತೀ ಪರೀಕ್ಷಾ ಕೇಂದ್ರದಲ್ಲಿನ ಪ್ರಕ್ರಿಯೆಗಳನ್ನು ವೀಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ಪ್ರಶ್ನೆ ಪತ್ರಿಕೆ ಪೂರೈಕೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಮೇಲೆ ನಿಗಾ ಇಡಲಾಗುವುದು. ಪ್ರತಿಯೊಂದು ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬರನ್ನು ಪರೀಕ್ಷಾ ವೀಕ್ಷಕರಾಗಿ ನಿಯೋಜಿಸುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. 

ಸಿಇಟಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ನಮೂದಿಸಬೇಕು. ಅರ್ಧ ಗಂಟೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಕೈಗಡಿಯಾರ ಕಟ್ಟಿಕೊಂಡು ಪರೀಕ್ಷೆಗೆ ಬರುವಂತಿಲ್ಲ. ಟ್ಯಾಬ್, ಮೊಬೈಲ್, ಕ್ಯಾಲ್ಕುಲೇಟರುಗಳನ್ನೂ ಕೇಂದ್ರದೊಳಗೆ ತರುವಂತಿಲ್ಲ. ಈ ಎಲ್ಲಾ ನಿಬಂಧನೆಗಳನ್ನು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ತಿಳಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ನಾಳೆಯಿಂದ (ಜೂನ್ 16) ಯುಜಿಸಿಇಟಿ ಪರೀಕ್ಷೆ ಆರಂಭ : ಹಾಲ್ ಟಿಕೆಟ್ ಜೊತೆಗೆ ಅಧಿಕೃತ ಗುರುತು ಪತ್ರದ ಜೊತೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅಭ್ಯರ್ಥಿಗಳಿಗೆ ಸೂಚನೆ Rating: 5 Reviewed By: karavali Times
Scroll to Top