ಬಂಟ್ವಾಳ, ಆಗಸ್ಟ್ 28, 2022 (ಕರಾವಳಿ ಟೈಮ್ಸ್) : ಪ್ರಸ್ತುತ ಶಿಕ್ಷಣವು ಮುಖ್ಯವಾಗಿ ಜ್ಞಾನಾಧಾರಿತ ಹಾಗೂ ಕೌಶಲ್ಯಾಧಾರಿತವಾಗಿದ್ದು ಪ್ರತಿಯೊಬ್ಬರೂ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಸರಕಾರದ ನಾಗರಿಕ ಸೇವೆಗಳ ಪರೀಕ್ಷೆಗಳನ್ನು ಎಲ್ಲರೂ ಬರೆಯಬೇಕು ಎಂದು ಕನ್ನಡ ಪ್ರಾಧ್ಯಾಪಕ ಚೇತನ್ ಮುಂಡಾಜೆ ಹೇಳಿದರು.
ಲಯನ್ಸ್ ಕ್ಲಬ್ ಬಂಟ್ವಾಳ, ಲಿಯೋ ಕ್ಲಬ್ ಬಂಟ್ವಾಳ ಗೋಲ್ಡ್ ಮತ್ತು ಯುನಿಕ್ ಎಜುಕೇರ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಿ ಸಿ ರೋಡಿನ ಲಯನ್ಸ್ ಸೇವಾ ಭವನದಲ್ಲಿ ಭಾನುವಾರ ನಡೆದ ಸಿಇಟಿ, ನೀಟ್, ಜೆಇಇ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ವಿಷನ್-2022 ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕಿ ಹರ್ಷಿತಾ ಪಿ ಅವರು ವೃತ್ತಿಪರ ಶಿಕ್ಷಣಕ್ಕಾಗಿ ಆಯೋಜಿಸಲಾಗುವ ಪ್ರವೇಶ ಪರೀಕ್ಷೆಗಳಾದ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಗಣಿತಶಾಸ್ತ್ರ ಉಪನ್ಯಾಸಕಿ ಕವಿತಾ ಯಾದವ್ ಕೆಲವು ಸರಳ ವಿಚಾರಗಳನ್ನು, ಬಹು ಆಯ್ಕೆ ಪ್ರಶ್ನೆಗಳನ್ನು ಉತ್ತರಿಸಲು ಬೇಕಾಗುವ ಕೆಲವು ಸರಳ ಸೂತ್ರಗಳ ಬಗ್ಗೆ ತಿಳಿಸಿದರು.
ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ಯ ಕಾರ್ಯಾಗಾರ ಉದ್ಘಾಟಿಸಿದರು. ಲಿಯೋ ಕ್ಲಬ್ ಅಧ್ಯಕ್ಷೆ ಭುವಿ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಲಿಯೋ ಕೋ-ಆರ್ಡಿನೇಟರ್ ಪ್ರೀತಮ್ ಪೆÇನ್ನಪ್ಪ ಎನ್ ಜಿ, ಜಿಲ್ಲಾ ಲಿಯೋ ಅಧ್ಯಕ್ಷ ಕವನ ಕುಬೆವೂರು, ಜಿಲ್ಲಾ ಲಿಯೋ ಎಡ್ವೈಸರ್ ಡಾ ದಿವ್ಯ ವಿ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment