ಬಂಟ್ವಾಳ, ಆಗಸ್ಟ್ 24, 2022 (ಕರಾವಳಿ ಟೈಮ್ಸ್) : ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ವೈಭವಪೂರ್ಣವಾಗಿ ಆಚರಿಸುವ ಹಿನ್ನಲೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ವೀರ ಯೋಧರ ತ್ಯಾಗ-ಬಲಿದಾನವನ್ನು ನೆನಪಿಸುವ ಹಾಗೂ ದೇಶಕ್ಕೆ ಶಾಂತಿ ಸಾಮರಸ್ಯ ಸಾರುವ ನಿಟ್ಟಿನಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಮಂಗಳವಾರ ಬಂಟ್ವಾಳದಲ್ಲಿ ಹಮ್ಮಿಕೊಂಡ ಪಾದಯಾತ್ರೆ ಸಂದರ್ಭ ಮಾಜಿ ಸಚಿವ ರಮಾನಾಥ ರೈ ನೇತೃತ್ವದ ನಿಯೋಗ ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ಅವರ ಬಂಟ್ವಾಳದ ಮನೆಗೆ ತೆರಳಿ ತ್ರಿವರ್ಣ ಧ್ವಜ ಹಸ್ತಾಂತರ ಮಾಡಿತು.
ರಮಾನಾಥ ರೈ ಅವರಿಂದ ಧ್ವಜ ಪಡೆದುಕೊಂಡ ಜನಾರ್ದನ ಪೂಜಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ರಕ್ಷಿತ್ ಶಿವರಾಮ್, ವಾಸು ಪೂಜಾರಿ ಲೋರಟ್ಟೋ, ಶಬ್ಬೀರ್ ಸಿದ್ದಕಟ್ಟೆ, ಶ್ರೀಮತಿ ಅಪ್ಪಿ ಮೊದಲಾದವರು ನಿಯೋಗದಲ್ಲಿದ್ದರು.
0 comments:
Post a Comment