ಮಂಗಳೂರು, ಆಗಸ್ಟ್ 30, 2022 (ಕರಾವಳಿ ಟೈಮ್ಸ್) : ಪೊಲೀಸ್ ಪಶ್ಚಿಮ ವಲಯದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆ ಮತ್ತು ಮಂಗಳೂರು ಪೊಲೀಸ್ ಕಮೀಷನರೇಟ್ ಘಟಕದ ಒಟ್ಟು 27 ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪಶ್ಚಿಮ ವಲಯ ಮಂಗಳೂರು ಮತ್ತು ಆಂತರಿಕ ಭದ್ರತಾ ವಿಭಾಗ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ 2 ವಾರಗಳ Unmanned Aerial Vehicle (UAV/Drone) ತರಬೇತಿಯನ್ನು ಆಗಸ್ಟ್ 29 ಸೋಮವಾರದಂದು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಉದ್ಘಾಟಿಸಿದರು.
ಪೊಲೀಸ್ ಅಧಿಕಾರಿಗಳಿಗೆ ಈ ತರಬೇತಿಯನ್ನು ದೇಶದಲ್ಲಿಯೇ ಕರ್ನಾಟಕ ರಾಜ್ಯವು ಮೊದಲ ಬಾರಿಗೆ ಹಮ್ಮಿಕೊಂಡಿದ್ದು, ರಾಜ್ಯದಲ್ಲಿ ಪ್ರಥಮವಾಗಿ ಪಶ್ಚಿಮ ವಲಯದ ಜಿಲ್ಲೆಯ ಅಧಿಕಾರಿ-ಸಿಬ್ಬಂದಿಗಳಿಗೆ ಆಂತರಿಕ ಭದ್ರತಾ ವಿಭಾಗ ಬೆಂಗಳೂರಿನ ತಜ್ಞರ ತಂಡತÅ ತರಬೇತಿಯನ್ನು ನೀಡುತ್ತಿದೆ.
ಡ್ರೋನ್ ಕುರಿತಾದ ವಿವರಗಳು ಮತ್ತು ಕಾನೂನುಗಳು ಅಲ್ಲದೇ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ UAV/Drone ಮತ್ತು ಅದರ ಪರಿಕರಗಳ ಉಪಯೋಗ ಮತ್ತು ಡ್ರೋನ್ ಆಪರೇಟ್ ಮಾಡುವ ಬಗ್ಗೆ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ. ರಾತ್ರಿ ಸಮಯದಲ್ಲೂ ಸೂಕ್ಷ್ಮ ಪ್ರದೇಶ, ಕಾಡು, ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಕೂಡಾ UAV/Drone ಅನ್ನು ಹಾರಿಸಿ ಮಾಹಿತಿ ಸಂಗ್ರಹಣೆಯ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ.
0 comments:
Post a Comment