ಬಂಟ್ವಾಳ : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಗೈದ ತಂದೆಗೆ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು - Karavali Times ಬಂಟ್ವಾಳ : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಗೈದ ತಂದೆಗೆ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು - Karavali Times

728x90

8 September 2022

ಬಂಟ್ವಾಳ : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಗೈದ ತಂದೆಗೆ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

ಬಂಟ್ವಾಳ, ಸೆಪ್ಟೆಂಬರ್ 08, 2022 (ಕರಾವಳಿ ಟೈಮ್ಸ್) : 2018ರ ಜನವರಿ ತಿಂಗಳಿನಲ್ಲಿ ಬಂಟ್ವಾಳ ತಾಲೂಕಿನ ಮೆಲ್ಕಾರ್ ಲಾಡ್ಜ್ ಮತ್ತು ಇರಾ ಗ್ರಾಮದಲ್ಲಿ ತಂದೆಯಿಂದಲೇ ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ತಂದೆ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಅವರ ಪುತ್ರ ದಾವೂದ್ (55) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಶೀಘ್ರ ಪಥ-2) ನ್ಯಾಯಾಲಯ 15 ವರ್ಷಗಳ ಕಾರಾಗೃಹ ವಾಸ ಹಾಗೂ 25 ಸಾವಿರ ರೂಪಾಯಿ ಜುಲ್ಮಾನೆ ವಿಧಿಸಿ ತೀರ್ಪು ಪ್ರಕಟಿಸಿದೆ. 

ಪ್ರಕರಣದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೆÇೀಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿ ಅಂದಿನ ಪೆÇಲೀಸ್ ವೃತ್ತ ನಿರೀಕ್ಷಕರಾಗಿದ್ದ ಶರಣ ಗೌಡ ಹಾಗೂ ಟಿ ಡಿ ನಾಗರಾಜ್ ಅವರು ತನಿಖೆ ಕೈಗೊಂಡು ಆರೋಪಿ ದಾವೂದ್ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. 

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಜಿಲ್ಲಾ ಪೆÇಲೀಸ್ ಅಧೀಕ್ಷಕರು ಮತ್ತು ಹೆಚ್ಚುವರಿ ಅಧೀಕ್ಷಕರ  ಮಾರ್ಗದರ್ಶನದಂತೆ ಪೆÇಲೀಸ್ ವೃತ್ತ ನಿರೀಕ್ಷಕರಾಗಿದ್ದ ಶರಣಗೌಡ ಮತ್ತು ಟಿ ಡಿ ನಾಗರಾಜ್ ಅವರು ನಡೆಸಿದ್ದು, ನ್ಯಾಯಾಲಯದ ವಿಚಾರಣೆಯಲ್ಲಿ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಅವರು ವಾದ ಮಂಡಿಸಿದ್ದರು. ಬಂಟ್ವಾಳ ಗ್ರಾಮಾಂತರ ಠಾಣಾ ಕೋರ್ಟ್ ಮಾನಿಟರಿಂಗ್ ಸೆಲ್ ನ ಪಿಎಸೈ ಹರೀಶ್ ಹಾಗೂ ಸಿಬ್ಬಂದಿಗಳು ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸೂಕ್ತ ಸಮಯಕ್ಕೆ ಹಾಜರುಪಡಿಸಿದ್ದರು ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಗೈದ ತಂದೆಗೆ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು Rating: 5 Reviewed By: karavali Times
Scroll to Top