ಬಂಟ್ವಾಳ, ಸೆಪ್ಟೆಂಬರ್ 12, 2022 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟೂರು ಗ್ರಾಮದ ನಿವಾಸಿ ಮುಹಮ್ಮದ್ ಶರೀಫ್ (32) ಅವರು ಭಾನುವಾರ ಮರದಿಂದ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.
ವಿಟ್ಲ ಸಮೀಪದ ಕೋಡಪದವು ನಿವಾಸಿ ಸುಲೈಮಾನ್ ಅವರ ಪುತ್ರರಾಗಿರುವ ಇವರು ಅಮ್ಟೂರು ಗ್ರಾಮದ ಅಜ್ಜನ ಮನೆಯಲ್ಲಿ ನೆಲೆಸಿದ್ದರು. ಮರ ಕಡಿಯುವ ಕೆಲಸ ಮಾಡುತ್ತಿದ್ದ ಶರೀಫ್ ಭಾನುವಾರ ಮರ ಕಡಿಯುವ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ, ಪತ್ನಿ, ಐದು ತಿಂಗಳ ಮಗು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
0 comments:
Post a Comment