ಬಂಟ್ವಾಳ, ಸೆಪ್ಟೆಂಬರ್ 09, 2022 (ಕರಾವಳಿ ಟೈಮ್ಸ್) : ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಖೋಖೋ ಪಂದ್ಯಾಟ ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೆ 8 ರಂದು ಗುರುವಾರ ನಡೆಯಿತು. ಚೆನ್ನೈತ್ತೋಡಿ ಗ್ರಾ ಪಂ ಅಧ್ಯಕ್ಷೆ ಶ್ರೀಮತಿ ಭಾರತಿ ರಾಜೇಂದ್ರ ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಸುಲೋಚನಾ ಜಿ ಕೆ ಭಟ್, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ವಾಮದಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕಮಲ್ ಶೆಟ್ಟಿ, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸದಸ್ಯರಾದ ನಾಗರಾಜ ಶೆಟ್ಟಿ, ಹಂಝ ಬಸ್ತಿಕೋಡಿ, ಪ್ರಭಾಕರ ಶೆಟ್ಟಿ, ಯಶೋಧರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ತಾಲೂಕು ಕ್ರೀಡಾ ಸಂಯೋಜಕ ಸಾಯಿರಾಂ ನಾಯಕ್ ಮೊದಲಾದವರು ಭಾಗವಹಿಸಿದ್ದರು.
ಕ್ರೀಡಾಕೂಟದಲ್ಲಿ ಕಲ್ಲಡ್ಕ ಪದವಿಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, ವಿಟ್ಲ ವಿಠಲ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು.
0 comments:
Post a Comment