ಬೆಂಗಳೂರು, ಸೆಪ್ಟೆಂಬರ್ 07, 2022 (ಕರಾವಳಿ ಟೈಮ್ಸ್) : ಮಂಗಳವಾರ ರಾತ್ರಿ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯ ಅರಣ್ಯ ಹಾಗೂ ಆಹಾರ ಖಾತೆ ಸಚಿವ ಉಮೇಶ್ ಕತ್ತಿ (61) ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಇಲ್ಲಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಉಮೇಶ್ ಕತ್ತಿ ಅವರಿಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಸಿಎಂ ಬೊಮ್ಮಾಯಿ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.
0 comments:
Post a Comment