ಬಂಟ್ವಾಳ, ಸೆಪ್ಟೆಂಬರ್ 23, 2022 (ಕರಾವಳಿ ಟೈಮ್ಸ್) : ಮಕ್ಕಳಿಗೆ ಪೌಷ್ಠಿಕ ಆಹಾರ ಸಕಾಲದಲ್ಲಿ ದೊರೆಯುವ ನಿಟ್ಟಿನಲ್ಲಿ ಪೋಷಕರು ಸದಾ ಎಚ್ಚರ ವಹಿಸಬೇಕು. ಮಕ್ಕಳನ್ನು ಪೌಷ್ಠಿಕ ಆಹಾರದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿದಾಗ ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ದೊಡ್ಡ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯ. ಮಕ್ಕಳ ಪೌಷ್ಠಿಕ ಆಹಾರದ ಬಗ್ಗೆ ಜಾಗೃತಿ ವಹಿಸಲು ಸರಕಾರ ಕೂಡಾ ಇಲಾಖೆಗಳ ಮೂಲಕ ಹಲವು ಕಾರ್ಯಕ್ರಮಗಳನ್ನು ನಡೆಸಿ ಪೋಷಕರನ್ನು ಎಚ್ಚರಿಸುತ್ತಿದೆ. ಸರಕಾರ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಮಕ್ಕಳನ್ನು ಆರೋಗ್ಯವಂತರನ್ನಾಗಿಸಿಕೊಳ್ಳಬೇಕು ಎಂದು ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಶುಕ್ರವಾರ ಬೋಗೋಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಣ್ ಮಾಸಾಚರಣೆ-2022 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ, ಸಹಾಯಕ ಅಧಿಕಾರಿಗಳಾ ಶೀಲಾವತಿ, ರೆಹನಾ, ಬಂಟ್ವಾಳ ಆರೋಗ್ಯಾಧಿಕಾರಿ ಅಶ್ವಿನಿ, ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾವ್, ಅಂಗನವಾಡಿ ಶಿಕ್ಷಕಿಯರಾದ ವಿನ್ನಿಫ್ರೆಡ್, ಪ್ರೇಮಾ, ಅಲಿಸಾ ಫೆರ್ನಾಂಡಿಸ್, ಬಬಿತಾ, ದೇವಕಿ, ಹರಿಣಾಕ್ಷಿ, ಶಶಿಕಲಾ, ವಸಂತಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 comments:
Post a Comment