ಬಂಟ್ವಾಳ, ಸೆಪ್ಟೆಂಬರ್ 13, 2022 (ಕರಾವಳಿ ಟೈಮ್ಸ್) : ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಇದರ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ಸಿದ್ದಕಟ್ಟೆ-ಗುಂಡೂರಿ ಸೇವಾಶ್ರಮದ ನಿವಾಸಿಗಳಿಗೆ ಮಂಗಳವಾರ ಮಧ್ಯಾಹ್ನದ ಊಟದ ವ್ಯವಸ್ಥೆ ಹಾಗೂ ದಿನಸಿ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬ್ಲಾಕ್ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷ ರೋಷನ್ ರೈ, ಸಾಮಾಜಿಕ ಜಾಲತಾಣದ ಮುಖ್ಯಸ್ಥರುಗಳಾದ ಅರುಣ್ ಕುಮಾರ್ ಶೆಟ್ಟಿ, ನಿರಂಜನ್ ರೈ, ಹರ್ಷದ್ ಕುಕ್ಕಿಲ, ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ, ಪುರಸಭಾ ಸದಸ್ಯ ಅಬೂಬಕರ್ ಸಿದ್ದೀಕ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಧುಸೂಧನ್ ಶೆಣೈ, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಪಂಚಾಯತ್ ಸದಸ್ಯ ರವಿರಾಜ್ ಜೈನ್, ಶರೀಫ್ ಭೂಯಾ,, ಮನೋಜ್ ಕನಪ್ಪಾಡಿ, ಪ್ರಶಾಂತ್ ಪಕ್ಕಳ, ವಿಜಯ ಅಲ್ಲಿಪಾದೆ, ಸಂಜಿತ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment