ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪದಗ್ರಹಣ - Karavali Times ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪದಗ್ರಹಣ - Karavali Times

728x90

12 September 2022

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪದಗ್ರಹಣ

ಸುಳ್ಯ, ಸೆಪ್ಟೆಂಬರ್ 12, 2022 (ಕರಾವಳಿ ಟೈಮ್ಸ್) : ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪದಗ್ರಹಣ ಸಮಾರಂಭವು ಸುಳ್ಯದ ಅಡ್ಪಂಗಾಯ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅದು ಅಸಂಘಟಿತ ಕಾರ್ಮಿಕರು ಅಧಿಕಾರಕ್ಕೆ ಬಂದಂತೆ. ದಶಕಗಳಿಂದ ಜಾತಿ ಪ್ರಮಾಣ ಪತ್ರಕ್ಕೆ ಹೋರಾಡುತ್ತಿದ್ದ ತಮಿಳು ಕಾರ್ಮಿಕರ ಬೇಡಿಕೆಯನ್ನು ಕಾಂಗ್ರೆಸ್ ಸರಕಾರವು 2013 ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ವೇಳೆ ಆಗಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಜಾತಿ ಪ್ರಮಾಣ ಪತ್ರ ದೊರಕಲು ಕಾರಣವಾಗಿದ್ದು ಕಾಂಗ್ರೆಸ್ ಪಕ್ಷ, ಅಸಂಘಟಿತ ಕಾರ್ಮಿಕರೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ 2023 ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. 

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ನೂತನ ಅಧ್ಯಕ್ಷ ಚಂದ್ರಲಿಂಗಂ ಸ್ವಾಗತಿಸಿ, ಪ್ರಸ್ತಾವನೆಗೈದರು. ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ, ಕೆ.ಪಿ.ಸಿ.ಸಿ. ಸದಸ್ಯ ಡಾ. ರಘು, ಕೆ.ಪಿ.ಸಿ.ಸಿ. ಸಂಯೋಜಕ ಕೃಷ್ಣಪ್ಪ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ದ.ಕ. ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಚಿನ್ ರಾಜ್ ಶೆಟ್ಟಿ, ಕೆ.ಪಿ.ಸಿ.ಸಿ. ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ, ಸುಳ್ಯ ಬ್ಲಾಕ್ ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ದ.ಕ. ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಜ್ಞಾನಶೀಲನ್ (ರಾಜು) ನೆಲ್ಲಿಕುಮೇರಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಉಸ್ತುವಾರಿ ಶರೀಫ್ ಬಲ್ನಾಡ್, ಜಿಲ್ಲಾ ಅಸಂಘಟಿತ ಸಾಮಾಜಿಕ ಜಾಲತಾಣದ ಮುಖಂಡ ನಿರಂಜನ್ ರೈ, ಸಂಯೋಜಕ ಹರ್ಷದ್ ಕುಕ್ಕಿಲ ಮೊದಲಾದವರು ಭಾಗವಹಿಸಿದ್ದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಂದಡ್ಕ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಈ ವೇಳೆ ಆದೇಶ ಪತ್ರ ವಿತರಿಸಲಾಯಿತು. 

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪದಗ್ರಹಣ Rating: 5 Reviewed By: karavali Times
Scroll to Top