ಬಂಟ್ವಾಳ, ಸೆಪ್ಟೆಂಬರ್ 09, 2022 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪಾಣೆಮಂಗಳೂರು ವಲಯ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇವುಗಲ ಜಂಟಿ ಆಶ್ರಯಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ನಡೆಯಿತು.
ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ಶ್ರೀನಿವಾಸ್ ಮೆಲ್ಕಾರ್ ಕಾರ್ಯಕ್ರಮ ಉದ್ಘಾಟಿಸಿದರು. ರೋನಾಲ್ಡ್ ಡಿ’ಸೋಜ ಅಧ್ಯಕ್ಷತೆ ವಹಿಸಿದ್ದರು. ಬಾಲಕೃಷ್ಣ ಕಾರಂತ ಏರುಂಬ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಹಾಗೂ ಇದರಿಂದ ಆಗುವ ಪರಿಣಾಮಗಳ ವಿದ್ಯಾರ್ಥಿಗಳಿಗೆ ವಿವರಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಕೆ ಭೋಜ, ಒಕ್ಕೂಟದ ವಲಯಾಧ್ಯಕ್ಷ ಗಂಗಾಧರ್, ಒಕ್ಕೂಟದ ಅಧ್ಯಕ್ಷೆ ವಸಂತಿ ಮೆಲ್ಕಾರ್ ಮೊದಲಾದವರು ಭಾಗವಹಿಸಿದ್ದರು. ಸೇವಾ ಪ್ರತಿನಿಧಿ ಸುಲೋಚನಾ ಸ್ವಾಗತಿಸಿ, ವಲಯ ಮೇಲ್ವಿಚಾರಕಿ ಅಮಿತ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment