ಬೆಂಗಳೂರು, ಸೆಪ್ಟೆಂಬರ್ 29, 2022 (ಕರಾವಳಿ ಟೈಮ್ಸ್) : ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಯುಜಿಸಿಇಟಿ-2022 ರ ಪರಿಷ್ಕೃತ ಫಲಿತಾಂಶವನ್ನು ಅಕ್ಟೋಬರ್ 1ರಂದು ಶನಿವಾರ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಈ ಹಿಂದೆ ಅಕ್ಟೋಬರ್ 3ರಂದು ಪರಿಷ್ಕೃತ ಫಲಿತಾಂಶ ಪ್ರಕಟಕ್ಕೆ ದಿನಾಂಕ ನಿಗದಿಯಾಗಿತ್ತು.
ಈ ಮೊದಲು ಯುಜಿ ಎಂಜಿ£ಯರಿಂಗ್ ಮತ್ತು ತಂತ್ರಜ್ಞಾನ ಕೋರ್ಸ್‍ಗಳ ಪ್ರವೇಶಕ್ಕೆ ಸಿಇಟಿ ಶ್ರೇಯಾಂಕಗಳನ್ನು ನಿರ್ಧರಿಸಲು ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠಕ್ಕೆ ಸರ್ಕಾರದ ಸಮಿತಿಯು ಎರಡು ಪ್ರಸ್ತಾವನೆಗಳನ್ನು ಒಳಗೊಂಡ ತನ್ನ ವರದಿಯನ್ನು ಸಲ್ಲಿಸಿತ್ತು.
ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ಪಡೆದ ಪಿಯು ಅಂಕಗಳನ್ನು ಪ್ರಸಕ್ತ ಈ ವರ್ಷದ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಪರಿಗಣಿಸಿ ಹೊಸದಾಗಿ ಜೇಷ್ಠತಾ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ಏಕಸದಸ್ಯ ಪೀಠವು ನಿರ್ದೇಶನ ನೀಡಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸಲ್ಲಿಸಿರುವ ಮೇಲ್ಮನವಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಅಕ್ಟೋಬರ್ 1ಕ್ಕೆ ಕೆಇಎ ಪರಿಷ್ಕೃತ ಫಲಿತಾಂಶ ಪ್ರಕಟ ಮಾಡಲಿದೆ.
0 comments:
Post a Comment