ವಿಟ್ಲ, ಸೆಪ್ಟೆಂಬರ್ 05, 2022 (ಕರಾವಳಿ ಟೈಮ್ಸ್) : ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು ವಿಟ್ಲ-ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು.
ಸಭಾಧ್ಯಕ್ಷತೆ ವಹಿಸಿದ್ದ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ ಬಿ ರಾಜಾರಾಮ್ ಮಾತನಾಡಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಬೇಕು ಎಂದರಲ್ಲದೆ ಸ್ವಾತಂತ್ರ್ಯ ನಡಿಗೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಒದಗಿಸುವ ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ. ಆದ್ದರಿಂದ ಅಸಂಘಟಿತ ಕ್ಷೇತ್ರವನ್ನು ಗುರುತಿಸಿ, ಅವರಿಗೆ ಸಿಗುವ ಸರಕಾರದ ಸವಲತ್ತುಗಳನ್ನು ಕೊಡಿಸುವಲ್ಲಿ ನಾವೆಲ್ಲರೂ ಶ್ರಮಿಸಬೇಕು ಎಂದರು.
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಸೇಸಪ್ಪ ನೆಕ್ಕಿಲ್ ಮಾತನಾಡಿ, ತನ್ನ ಜೀವನವನ್ನು ಬಡವರಿಗೆ, ಶ್ರಮಿಕರಿಗೆ, ದೀನ ದಲಿತರಿಗೆ ಮುಡಿಪಾಗಿಟ್ಟಿದ್ದೇನೆ ಎಂದರು.
ಸಾಮಾಜಿಕ ಜಾಲತಾಣದ ಜಿಲ್ಲಾ ಮುಖ್ಯಸ್ಥ ನಿರಂಜನ್ ರೈ ಮಾತನಾಡಿ, ಇಂದು ಚುನಾವಣೆಗಳು ಅಭಿವೃದ್ಧಿ ಹಿನ್ನಲೆಯಲ್ಲಿ ನಡೆಯುತ್ತಿಲ್ಲ. ಬದಲಾಗಿ ಕೋಮು ಮತ್ತು ಭಾವನಾತ್ಮಕ ವಿಷಯಗಳ ಮೇಲೆ ನಡೆಯುತ್ತದೆ. ಇದರಿಂದಾಗಿ ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ವಲಸೆ ಹೋಗದೆ ಹೋರಾಟ ಮಾಡಿ ಪಕ್ಷ ಕಟ್ಟುವಲ್ಲಿ ಶ್ರಮಿಸಬೇಕು ಎಂದರು.
ಜಿ ಪಂ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್ ಪ್ರಸ್ತಾವನೆಗೈದರು. ಸಭೆಯಲ್ಲಿ ಉಸ್ತುವಾರಿ ಜ್ಞಾನಶೀಲ, ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್, ರಮಾನಾಥ್ ವಿಟ್ಲ, ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಪದಾಧಿಕಾರಿಗಳಾದ ಡೀಕಯ್ಯ, ಅಗರಿ ಬಾಬು, ಲೋಕೇಶ್, ಬಶೀರ್ ಅಹ್ಮದ್, ಜಗನ್ನಾಥ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment