ನವೆಂಬರ್ 12, 13 ರಂದು ಅಮ್ಮುಂಜೆ ಶಾಲೆಯಲ್ಲಿ 22ನೇ ಬಂಟ್ವಾಳ ತಾಲೂ ಕನ್ನಡ ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರಾಗಿ ಪ್ರೊ ಬಾಲಕೃಷ್ಣ ಗಟ್ಟಿ - Karavali Times ನವೆಂಬರ್ 12, 13 ರಂದು ಅಮ್ಮುಂಜೆ ಶಾಲೆಯಲ್ಲಿ 22ನೇ ಬಂಟ್ವಾಳ ತಾಲೂ ಕನ್ನಡ ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರಾಗಿ ಪ್ರೊ ಬಾಲಕೃಷ್ಣ ಗಟ್ಟಿ - Karavali Times

728x90

19 October 2022

ನವೆಂಬರ್ 12, 13 ರಂದು ಅಮ್ಮುಂಜೆ ಶಾಲೆಯಲ್ಲಿ 22ನೇ ಬಂಟ್ವಾಳ ತಾಲೂ ಕನ್ನಡ ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರಾಗಿ ಪ್ರೊ ಬಾಲಕೃಷ್ಣ ಗಟ್ಟಿ

ಬಂಟ್ವಾಳ, ಅಕ್ಟೋಬರ್ 19, 2022 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ  ಕೆ ಬಾಲಕೃಷ್ಣ ಗಟ್ಟಿ ಅವರನ್ನು ಮಾಡಲಾಗಿದೆ ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ತಿಳಿಸಿದ್ದಾರೆ. 

ಬಂಟ್ವಾಳ ತಾಲೂಕಿನಲ್ಲಿ ದಿನಪತ್ರಿಕೆಯೊಂದನ್ನು ಸ್ವತಃ ನಡೆಸಿ ಸ್ಥಳೀಯ ಹಲವು ಪ್ರತಿಭೆಗಳು ಬೆಳಕಿಗೆ ಬರಲು ಕಾರಣರಾದ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಮಾಧ್ಯಮ ರಂಗದಲ್ಲಿ ಗಣನೀಯ ಸಾಧನೆ ಮಾಡಿದ ಪೆÇ್ರ ಗಟ್ಟಿ ಅವರನ್ನು ಈ ಬಾರಿ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಎಂ ಪಿ ಶ್ರೀನಾಥ್ ಹೇಳಿಕೊಂಡಿದ್ದಾರೆ. 

ಸಮ್ಮೇಳನಾಧ್ಯಕ್ಷ ಪ್ರೊ  ಗಟ್ಟಿಗೆ ಅವರಿಗೆ ಇದೀಗ 79ರ ಇಳಿ ವಯಸ್ಸಾಗಿದ್ದು, ಇವರು ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ. ಪ್ರಾಧ್ಯಾಪಕರಾಗಿ ಮತ್ತು ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ಮಂಗಳೂರು ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 

ಪತ್ರಕರ್ತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಗಟ್ಟಿ ಅವರು, 1996ರಲ್ಲಿ ಬಂಟ್ವಾಳದಲ್ಲಿ ನೇತ್ರಾವತಿ ವಾರ್ತೆ ಪತ್ರಿಕೆ ಹೊರ ತಂದು ಸ್ಥಳೀಯ ಹಲವು ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದವರು. 1980 ರಿಂದ 1998 ರವರೆಗೆ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳಿಗೆ ಬಂಟ್ವಾಳ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. 1998 ರಿಂದ 2003 ರವರೆಗೆ ಜನವಾಹಿನಿ ಕನ್ನಡ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ಅವರು, ತಾಲೂಕು ಉಚಿತ ಕಾನೂನು ನೆರವು ಸಮಿತಿ ಸದಸ್ಯರಾಗಿದ್ದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸ್ವರ್ಣ ರಥದ ವಿಶೇಷ ಸಂಚಿಕೆಯ ಸಂಪಾದಕರೂ ಆಗಿ ಸೇವೆ ಸಲ್ಲಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ನವೆಂಬರ್ 12, 13 ರಂದು ಅಮ್ಮುಂಜೆ ಶಾಲೆಯಲ್ಲಿ 22ನೇ ಬಂಟ್ವಾಳ ತಾಲೂ ಕನ್ನಡ ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರಾಗಿ ಪ್ರೊ ಬಾಲಕೃಷ್ಣ ಗಟ್ಟಿ Rating: 5 Reviewed By: karavali Times
Scroll to Top